ಸೋಮವಾರ, ಸೆಪ್ಟೆಂಬರ್ 27, 2021
22 °C
ಬೇಡಿಕೆಗೆ ಸ್ಪಂದಿಸದಿದ್ದರೆ 29 ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟ: ಎಚ್ಚರಿಕೆ

ಯಾದಗಿರಿ| 15ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12,000 ಗೌರವಧನ, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 15ದಿನಕ್ಕೆ ಕಾಲಿಟ್ಟಿದೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ನಡೆದ ಪ್ರತಿಭಟನಾ ಧರಣಿಯಲ್ಲಿ ಐಯುಟಿಯುಸಿಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ ಡಿ.ಉಮಾದೇವಿ ಮಾತನಾಡಿ, ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಜುಲೈ 29 ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಗಡುವು ನೀಡಲಾಗಿದೆ ಎಂದರು.

ಆಯಾ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳುವುದರ ಮೂಲಕ ಹೋರಾಟ ತೀವ್ರಗೊಳಿಸಬೇಕಾಗಿದೆ. ಅದೇ ರೀತಿ ಜಿಲ್ಲೆಯಲ್ಲಿಯೂ ‘ಜಿಲ್ಲಾ ಮಟ್ಟದ ಹೋರಾಟ’ ನಡೆಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಆಶಾ ಮುಷ್ಕರಕ್ಕೆ ಬೆಂಬಲಿಸಿ ಎಐಡಿಎಸ್‍ಒ ಜಿಲ್ಲಾ ಅಧ್ಯಕ್ಷ ಎಚ್.ಪಿ.ಸೈದಪ್ಪ, ಎಐಡಿವೈಒ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ಮಾತನಾಡಿದರು. ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಬಿ.ಎನ್‌.ರಾಮಲಿಂಗಪ್ಪ, ಆಶಾ ಕಾರ್ಯಕರ್ತೆಯರಾದ ಶೋಭಾ, ಭೀಮೇಶ್ವರಿ, ಸುಭದ್ರಮ್ಮ, ಸುಜಾತ, ಉಷಾರಾಣಿ, ಗಿರಿಜಮ್ಮ, ಚೈತ್ರಾ, ಮೀನಾಕ್ಷಿ, ಸರೋಜ, ಮಣೆಮ್ಮ, ದೇವಿಂದ್ರಮ್ಮ ಸೇರಿದಂತೆ ನೂರಾರು ಕಾರ್ಯಕರ್ತೆಯರು ಭಾಗವಹಿಸಿದ್ದರು.

ನಂತರ ಬೇಡಿಕೆಗಳ ಮನವಿ ಪತ್ರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಳುಹಿಸಿಕೊಡಲಾಯಿತು.

ಕೋವಿಡ್-19ಗೆ ತುತ್ತಾದ ಆಶಾಗೆ ಪರಿಹಾರ, ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿ ಜುಲೈ 10ರಿಂದ ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಿ ಮುಷ್ಕರ ನಡೆಯುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು