ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಅಂತರ ಮರೆತು ಠಾಣೆಯಲ್ಲಿ ಪಿಎಸ್‌ಐ ಜನ್ಮದಿನ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರ ಪೊಲೀಸ್‌ ಠಾಣೆಯ ಪಿಎಸ್ಐ ಸೌಮ್ಯ ಅವರ ಹುಟ್ಟಿದ ದಿನವನ್ನು ಹಲವಾರು ಮಂದಿ ಸೇರಿ ಸಂಭ್ರಮದಿಂದ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅಂತರ ಪಾಲನೆಯಾಗಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದಾರೆ.

ಭಾನುವಾರ ರಾತ್ರಿ ಪೊಲೀಸ್ ಠಾಣೆಯಲ್ಲೇ ಪಿಎಸ್ಐ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎನ್ನಲಾದ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

‘ಕೊರೊನಾದ ಈ ಸಂದರ್ಭದಲ್ಲಿ ಅಂತರ ಪಾಲನೆ ಮಾಡದೇ ಕಾನೂನು ಪಾಲಕರೇ ಹೀಗೆ ಮಾಡಿದರೆ ಹೇಗೆ’ ಎಂದು ಸಾಮಾಜಿಕ ಕಾರ್ಯಕರ್ತ ಬಸವರಾಜ ಪಾಟೀಲ ಪ್ರಶ್ನಿಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ ಪ್ರತಿಕ್ರಿಯಿಸಿ, ‘ಮಾಹಿತಿ ಕೇಳಿದ್ದೇನೆ. ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು