ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ: ತಂತ್ರಜ್ಞಾನ ಸದ್ಭಳಕೆಗೆ ಶಾಸಕ ಸಲಹೆ

Last Updated 26 ಜನವರಿ 2022, 3:53 IST
ಅಕ್ಷರ ಗಾತ್ರ

ಶಹಾಪುರ: ತೀವ್ರ ಸ್ಪರ್ಧಾತ್ಮಕವಾದ ವಿಜ್ಞಾನ ಹಾಗೂ ತಂತ್ರಜ್ಞಾನ ಜಗತ್ತಿನ ನಡುವೆ ನಾವೆಲ್ಲ ಬದುಕುತ್ತಿರುವುದರಿಂದ ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನವನ್ನು ಕರಗತ ಮಾಡಿಕೊಳ್ಳಬೇಕು ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.

ತಾಲ್ಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಿದ ಅಟಲ್‌ ಟಿಂಕರಿಂಗ್‌ ಪ್ರಯೋಗಾಲಯ (ಎಟಿಎಲ್), ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ನೂತನ ಮೂರು ಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಹಿತಿ ತಂತ್ರಜ್ಞಾನದಲ್ಲಿ ತೀವ್ರ ಸ್ಪರ್ಧೆ ಇದೆ. ಇಂತಹ ಮಹತ್ವದ ವಿಷಯವನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದರು.

371 (ಜೆ) ಜಾರಿ ಬಳಿಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಾಂತಗೌಡ ಪಾಟೀಲ ಮಾತನಾಡಿ, ಮಹತ್ವಾಕಾಂಕ್ಷೆ ಯೋಜನೆಯಡಿ ಯಾದಗಿರಿ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ 15ನೇ ಶ್ರೇಣಿ ಪಡೆದಿತ್ತು. ಈ ತಿಂಗಳು 2ನೇ ಶ್ರೇಣಿ ಪಡೆದಿದೆ. ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಸೌಲಭ್ಯ ನೀಡಬೇಕಾಗಿದೆ. ಜಿಲ್ಲೆಯಲ್ಲಿ ರಸ್ತಾಪುರ ಪ್ರೌಢಶಾಲೆ ಮಾದರಿ ಶಾಲೆಯಾಗಿದೆ ಎಂದರು.

ಪ್ರೌಢಶಾಲೆಯ ಮುಖ್ಯಶಿಕ್ಷಕ ಮಲ್ಲನಗೌಡ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ, ನೌಕರ ಸಂಘದ ಅಧ್ಯಕ್ಷ ರಾಯಪ್ಪಗೌಡ ಹುಡೇದ, ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥರಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ಹೊನ್ನಪ್ಪ ಹೊಸ್ಮನಿ, ನಾಗಣ್ಣ ಪೂಜಾರಿ, ಶರಬಣ್ಣ ಸಾಹು, ಶಂಬನಗೌಡ ಪಾಟೀಲ, ಅಮರಪ್ಪ ಜಿಗೇರಿ, ಶಿಕ್ಷಕರಾದ ಜೆಟ್ಟೆಪ್ಪ ಭಾವಿಮನಿ, ಬಸನಗೌಡ ಬೆಳ್ಳಿಕಟ್ಟಿ, ರಾಮಕೃಷ್ಣಾ ಕಟ್ಕಾವಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT