ಹುಣಸಗಿ: ‘ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು ಇದೆ. ಸರ್ಕಾರ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿದೆ. ಆದ್ದರಿಂದ ಮಕ್ಕಳಿಗೆ ಕೂಲಿ ಕೆಲಸಕ್ಕೆ ಕಳಿಸುವದು ಅಪರಾಧವಾಗಿದೆ’ ಎಂದು ಪೊಲೀಸ್ ಕಾನ್ಸ್‌ಟೇಬಲ್ ಶಿವನಗೌಡ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾರ್ಮಿಕ ಇಲಾಖೆ, ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಕಾಡಂಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶರಣಪ್ಪ ಯಡಹಳ್ಳಿ, ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಶರಣು ಎಸ್ ಕಾಡಂಗೇರಾ ಮಾತಾನಾಡಿದರು.
ಸಿದ್ದೇಶ್ವರ ಕಲಾ ತಂಡದ ಮುಖ್ಯಸ್ಥರಾದ ಶರಣಯ್ಯ ಸ್ವಾಮಿ ಹಿರೇಮಠ, ಚಂದ್ರಕಾಂತ ಆಳಂದ, ಮಲ್ಲಿಕಾರ್ಜುನ ಬಾಗೇವಾಡಿ, ಜ್ಯೋತಿ, ಕಮಲ ಬಾಗೇವಾಡಿ, ಪ್ರಕಾಶ ಇದ್ದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿ ಪ್ರಕಾಶ ಪಾಟೀಲ ಬಾಲ ಕಾರ್ಮಿಕ ವಿರೋಧಿ ದಿನದ ಕುರಿತು ತಿಳಿವಳಿಕೆ ನೀಡಿದರು.
ಬಳಿಕ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಪ್ರಮಾಣ ವಚನ ಬೊಧಿಸಿದರು. ಈ ಸಂದರ್ಭದಲ್ಲಿ ಬಸರಡ್ಡಿ ಕುಪ್ಪಿ, ರೇವಣಸಿದ್ದಯ್ಯ ಹಿರೇಮಠ, ರಶ್ಮಿ, ಮಾನಪ್ಪ ಬಡಿಗೇರ, ಅನೀಲ, ಸೈಯದ್ ಮೀರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.