ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

76ನೇ ಸ್ವಾತಂತ್ರ್ಯೋತ್ಸವ: ಯಾದಗಿರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಚವಾಣ್

Last Updated 15 ಆಗಸ್ಟ್ 2022, 4:28 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ 76ನೇ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ನಂತರ ಸಚಿವ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿದ್ದೇವೆ. ಸ್ವಾತಂತ್ರ್ಯ ಪಡೆಯಲು ಹಲವಾರು ಮಹನೀಯರು ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ನೆನೆಯಬೇಕು. ಮಹತ್ವಾಕಾಂಕ್ಷೆ ಜಿಲ್ಲೆಯ ಯೋಜನೆಯಡಿ 10 ಸ್ಥಾನದೊಳಗೆ ಜಿಲ್ಲೆ ಸ್ಥಾನ ಪಡೆದಿದೆ. ಇದು ಅಭಿನಂದನೀಯ ಎಂದರು.

ಭಾರತ ವಿಶ್ವಗುರು ಆಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಕೈಗೊಂಡಿದೆ ಎಂದರು.

ಈ ವೇಳೆ ಶಾಸಕ ವೆಂಕಟರೆಡ್ಡಿ‌ ಮುದ್ನಾಳ,‌ ವಿಧಾನ ಪರಿಷತ್ ಸದಸ್ಯ ಬಾಬುರಾವ ಚಿಂಚನಸೂರ, ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಪಂ ಸಿಇಒ ಅಮರೇಶ ಆರ್ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಯೂಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅ‍ಂಬಿಗೇರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಯೂಡಾ ಆಯುಕ್ತ ಬಕ್ಕಪ್ಪ‌ಹೊಸಮನಿ‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT