ಮಂಗಳವಾರ, ಸೆಪ್ಟೆಂಬರ್ 29, 2020
23 °C

ಯಾದಗಿರಿ: ಗೋನಾಲ ದುರ್ಗಾದೇವಿ ದರ್ಶನ ಪಡೆದ ಶ್ರೀರಾಮಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಡಗೇರಾ: ಆರೋಗ್ಯ ಸಚಿವ ಶ್ರೀರಾಮುಲು ತಾಲ್ಲೂಕಿನ ಗೋನಾಲ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ದುರ್ಗಾದೇವಿಯ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದರು.

‘ದೇವಿಯ ಶಕ್ತಿ ಕಂಡು ದೇವಿಯ ದರ್ಶನ ಪಡೆಯಲು ಬಂದಿದ್ದೇನೆ. ದೇವಿಯ ಆಶೀರ್ವಾದ ಇದ್ದರೆ ಯಶಸ್ಸು ಕಾಣುತ್ತೇನೆ’ ಎಂದರು.

ದುರ್ಗಾದೇವಿ ಮೂರ್ತಿ ಬಗ್ಗೆ ಮತ್ತು ದೇವಿಯ ಮಹತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ‘ಶ್ರೀರಾಮುಲು, ಉಪ ಮುಖ್ಯಮಂತ್ರಿ, ಕರ್ನಾಟಕ ಸರ್ಕಾರ’ ಎಂದು ಅವರು ಬರೆದ ಚೀಟಿಯನ್ನು ದೇವಿಯ ಮುಂದೆ ಇಟ್ಟು ಪೂಜೆ ಮಾಡಲಾಯಿತು ಎಂದು ದೇವಿಯ ಅರ್ಚಕ ಮರೆಣ್ಣ ಪೂಜಾರಿ ಮಾಹಿತಿ ನೀಡಿದರು.

ಕಳೆದ ಜನವರಿ ತಿಂಗಳಲ್ಲಿ ನಡೆದ ಜಾತ್ರೆಗೆ ಡಿ.ಕೆ ಶಿವಕುಮಾರ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ನಂತರದಲ್ಲಿ ಅವರು ತಾಯಿಯ ಆಶೀರ್ವಾದದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರು. ಅದರಂತೆ ಇವರು ಸಹ ತಾಯಿಯ ದರ್ಶನದಿಂದ ಮುಂದಿನ ಮುಖ್ಯಮಂತ್ರಿಯಾಗುವರೇ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಸ್ಥಳೀಯರು.

ಈ ಸಂದರ್ಭದಲ್ಲಿ ಚಂದ್ರಶೇಖರಗೌಡ ಮಾಗನೂರು, ಸಿದ್ದಣ್ಣಗೌಡ ಕಾಡಂನೋರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು