ಶನಿವಾರ, ಅಕ್ಟೋಬರ್ 16, 2021
23 °C

ಏಕಲವ್ಯ ಶಾಲೆ ಉದ್ಘಾಟನೆ ಸಮಾರಂಭಕ್ಕೆ ನೀಡದ ಆಹ್ವಾನ: ಬಾಬುರಾವ ಚಿಂಚನಸೂರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ತಾಲ್ಲೂಕಿನ ಬಂದಳ್ಳಿ ಗ್ರಾಮದ ಏಕಲವ್ಯ  ಮಾದರಿ ವಸತಿ ಶಾಲೆ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ ನೀಡದ ಕಾರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ಜಿಲ್ಲಾಡಳಿತ, ಸಚಿವ ಶ್ರೀರಾಮಲು ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿ ಕಾರ್ಯಕ್ರಮ‌ ರದ್ದುಗೊಳಿಸುವಂತೆ ಆಗ್ರಹಿಸಿದರು.

ಬಂದಳ್ಳಿ ಗ್ರಾಮದ ಬಳಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಕಾರುಗೆ ಅಡ್ಡ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಸಿಂದಗಿ ಉಪ ಚುನಾವಣಾ ಅಂಗವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೆ. ಆದರೆ‍, ನನ್ನ ಗಮನಕ್ಕೆ ತಾರದೇ ಸಮಾರಂಭ ಆಯೋಜಿಸಲಾಗಿದೆ. ಏಕಲವ್ಯ ಶಾಲೆ ನಾನು ಸಚಿವನಾಗಿದ್ದಾಗ ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಇಂಥ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡದಿದ್ದರೆ ಹೇಗೆ ಎಂದು ಕಿಡಿಕಾರಿದರು.

ಐದು ಬಾರಿ ಶಾಸಕ, ಎರಡು ಬಾರಿ ಸಚಿವನಾಗಿದ್ದೇನೆ. ನನ್ನ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡದಿದ್ದರೆ ಹೇಗೆ ಆಕ್ರೋಶ ಹೊರ ಹಾಕಿದರು.

ಈ ವೇಳೆ ಸಚಿವ ಶ್ರೀರಾಮಲು ಅವರು ಚಿಂಚನಸೂರ ಮನವೊಲಿಸಿದರೂ ವಾಪಾಸ್ ಯಾದಗಿರಿಗೆ ತೆರಳಿದರು. 

ಸಾರಿಗೆ ಮತ್ತು ಪರಿಶಿಷ್ಟ  ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು  ಅಕ್ಟೋಬರ್ 9ರಂದು ಬೆಳಿಗ್ಗೆ 10 ಗಂಟೆ ಕಟ್ಟಡ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು