ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ | ಬಸವಸಾಗರ ಜಲಾಶಯ ಭರ್ತಿ: ಸಚಿವ, ಶಾಸಕರಿಂದ ಬಾಗಿನ ಅರ್ಪಣೆ

Published : 20 ಆಗಸ್ಟ್ 2024, 12:26 IST
Last Updated : 20 ಆಗಸ್ಟ್ 2024, 12:26 IST
ಫಾಲೋ ಮಾಡಿ
Comments

ನಾರಾಯಣಪುರ (ಯಾದಗಿರಿ ಜಿಲ್ಲೆ): ಹುಣಸಗಿ ತಾಲ್ಲೂಕಿನ ಬಸವಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಕಳೆದ ಬಾರಿ ಸಮರ್ಪಕವಾಗಿ ಮಳೆಯಾಗದೆ ಎರಡನೇ ಬೆಳೆಗೆ ನೀರು ಇರಲಿಲ್ಲ. ಆದರೆ, ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಲಾಗುತ್ತಿದೆ ಎಂದು ಸಚಿವ ದರ್ಶನಾಪುರ ಹೇಳಿದರು.

ಈ ಸಂದರ್ಭದಲ್ಲಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ, ಲಿಂಗಸೂಗೂರು ಎಂಎಲ್ಸಿ ಶರಣಗೌಡ ಬಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಕೆಬಿಜೆಎನ್‌ಎಲ್ ಮುಖ್ಯ ಎಂಜಿನಿಯರ್‌ ಆರ್.ಮಂಜುನಾಥ, ಅಧೀಕ್ಷಕ ಎಂಜಿನಿಯರ್‌ ರಮೇಶ ಜಿ ರಾಠೋಡ್, ಕಾರ್ಯನಿರ್ವಾಹಕ ಎಂಜಿನಿಯರ್‌ ಸುರೇಂದ್ರರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT