ಮತದಾನ ಪಟ್ಟಿ ಪರಿಷ್ಕರಣೆ: ಜಾಗೃತಿ ವಾಹನಕ್ಕೆ ಚಾಲನೆ

ಯಾದಗಿರಿ: ಜಿಲ್ಲೆಯಲ್ಲಿ ಮತದಾನ ಪಟ್ಟಿ ಪರಿಷ್ಕರಣೆ ಕುರಿತು ಅರಿವು ಮೂಡಿಸಲು ಸಿದ್ದಪಡಿಸಿರುವ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.
ಜಿಲ್ಲೆಯ 18 ವರ್ಷ ಮೇಲ್ಪಟ್ಟವರು ಮತದಾನ ಗುರುತಿನ ಚೀಟಿ ಪಡೆಯುವುದು ಮತ್ತು ಪರಿಷ್ಕರಣೆ ಇದ್ದರೆ ಕೂಡಲೇ ನಮೂದಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಉಪವಿಭಾಗಾಧಿಕಾರಿ ಶಂಕರ ಸೋಮನಾಳ ಹಾಗೂ ಪ್ರಭಾರಿ ನಗರಸಭೆ ಪೌರಾಯುಕ್ತ ಬಕ್ಕಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.