ಯಾದಗಿರಿ: ‘ಜಿಲ್ಲೆಯ ಬ್ಯಾಂಕ್ ಹಾಗೂ ಎಂಟಿಎಂ ಕೇಂದ್ರಗಳ ಸಮಗ್ರ ಭದ್ರತೆಗೆ ಅವಶ್ಯಕ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೋಲಿಸ್ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ವಿವಿಧ ಬ್ಯಾಂಕ್ ಹಾಗೂ ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ಬ್ಯಾಂಕ್ ಹಾಗೂ ಎಟಿಎಂಗಳ ಭದ್ರತೆ ಹಾಗೂ ಸುರಕ್ಷತೆಗಾಗಿ ಆರ್ಬಿಐ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಬ್ಯಾಂಕ್ ಹಾಗೂ ಎಟಿಎಂ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರೆ, ಭದ್ರತಾ ಸಿಬ್ಬಂದಿಯನ್ನು ತಪ್ಪದೇ ನಿಯೋಜಿಸಬೇಕು’ ಎಂದು ಬ್ಯಾಂಕ್ ವ್ಯವಸ್ಥಾಪಕರಿಗೆ ತಾಕೀತು ಮಾಡಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾತನಾಡಿ, ‘ಸುರಕ್ಷತೆಯ ದೃಷ್ಟಿಯಿಂದ ಎಟಿಎಂ ಕೇಂದ್ರಗಳಲ್ಲಿ ಬ್ಯಾಂಕ್ ಶಾಖೆಗಳಲ್ಲಿ ಅಲಾರಾಂ ಅಳವಡಿಸಬೇಕು. ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಆರ್ಬಿಐ ನಿಯಾಮವಳಿಗೆ ಅನುಗುಣವಾಗಿ ಸುರಕ್ಷತೆಯ ಎಸ್ಒಪಿ ಪಾಲನೆ ಮಾಡಬೇಕು’ ಎಂದರು.

ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಾಂಚಾಳ, ಸಹಕಾರ ಸಂಘಗಳ ಉಪ ನಿಬಂಧಕರು ಪವನ್ ಕುಮಾರ್, ವಿವಿಧ ಬ್ಯಾಂಕ್ಗಳ ಮ್ಯಾನೇಜರ್ಗಳು, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುರಕ್ಷತಾ ಸಾಧನಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಅವುಗಳ ವರದಿಯನ್ನು 30 ದಿನಗಳ ಒಳಗಾಗಿ ಸಲ್ಲಿಕೆ ಮಾಡಬೇಕು
ಪೃಥ್ವಿಕ್ ಶಂಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.