ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಸಾಗರ: 1.60 ಲಕ್ಷ  ಕ್ಯುಸೆಕ್ ನೀರು ನದಿಗೆ

Last Updated 7 ಸೆಪ್ಟೆಂಬರ್ 2022, 16:41 IST
ಅಕ್ಷರ ಗಾತ್ರ

ನಾರಾಯಣಪುರ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯುಸೆಕ್ ನಷ್ಟು ನೀರನ್ನು ಬುಧವಾರ ಕೃಷ್ಣಾ ನದಿಗೆ ಹರಿಸಲಾಗಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.

ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹಾಗೂ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಸುರಿದ ಅಪಾರ ಮಳೆಯಿಂದ ಬುಧವಾರ ರಾತ್ರಿ ಜಲಾಶಯಕ್ಕೆ ಒಟ್ಟು 1.15 ಲಕ್ಷ ಕ್ಯುಸೆಕ್ ನೀರು ಹರಿದುಬರುತ್ತಿದೆ. 25 ಕ್ರಸ್ಟ್ ಗೇಟ್ ತೆರೆದು 1.54 ಲಕ್ಷ ಕ್ಯುಸೆಕ್ ಹಾಗೂ ಮುರುಡೇಶ್ವರ ಜಲ ವಿದ್ಯುತ್ ಸ್ಥಾವರದಿಂದ 6 ಸಾವಿರ ಕ್ಯುಸೆಕ್ ಒಟ್ಟು 1.60 ಲಕ್ಷ ಕ್ಯುಸೆಕ್ ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಕೃಷ್ಣಾ ನದಿಗೆ ಹರಿ ಬಿಡುವ ಸಾಧ್ಯತೆ ಇದ್ದು ನದಿ ತೀರದ ಗ್ರಾಮಗಳ ಗ್ರಾಮಸ್ಥರು ನದಿಗೆ ಇಳಿಯದಂತೆ ಮುಂಜಾಗ್ರತೆ ವಹಿಸುವಂತೆ ಅಣೆಕಟ್ಟು ವಿಭಾಗದ ಪ್ರಭಾರಿ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಪ್ರಕಾಶ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT