ಮಂಗಳವಾರ, ಮೇ 18, 2021
24 °C

ಬಸವಸಾಗರ: 28 ಗೇಟ್ ಮೂಲಕ 2.94 ಲಕ್ಷ ಕ್ಯುಸೆಕ್ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರಕ್ಕೆ ಬುಧವಾರವೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದರಿಂದಾಗಿ 28 ಮುಖ್ಯ ಕ್ರಸ್ಟ್‌ ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ.

ಕೃಷ್ಣೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರಿಂದಾಗಿ ಜಲಾಶಯದ ಮಟ್ಟ ಕಾಯ್ದುಕೊಂಡು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

ಕಳೆದ ನಾಲ್ಕು ದಿನದಿಂದಲೂ ಈ ನೀರಿನ ಹರಿವಿನ ಪ್ರಮಾಣ ಏರುಮುಖವಾಗಿದ್ದು, ಬುಧವಾರ ಸಂಜೆ 2.70 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರಿಂದಾಗಿ ಜಲಾಶಯದ ಮಟ್ಟ 489.89 ಮೀಟರ್ ಕಾಯ್ದುಕೊಂಡು 2.94 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

ಇದರಿಂದಾಗಿ ಅಲ್ಲಲ್ಲಿ ನದಿ ತೀರದಲ್ಲಿರುವ ಹೊಲ ಗದ್ದೆಗಳಿಗೆ ನೀರು ನುಗ್ಗಿದ್ದು, ನೀರಿನ ಹರಿವು ಕಡಿಮೆಯಾದ ಬಳಿಕವಷ್ಟೇ ಹಾನಿಯ ಅಂದಾಜು ಲಭ್ಯವಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು