ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆಯಿಂದ ಬಸವಸಾಗರ ಜಲಾಶಯದ ಮೂಲಕ ಹೆಚ್ಚಿನ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.

ಶುಕ್ರವಾರ ಬೆಳಿಗ್ಗೆ ಕೇವಲ 20 ಸಾವಿರ ಕ್ಯೂಸೆಕ್ ಒಳಹರಿವು ಇತ್ತು. ಶನಿವಾರ ಬೆಳಿಗ್ಗೆ 30 ಸಾವಿರ ಕ್ಯೂಸೆಕ್ಗೆ ಏರಿಕೆಯಾಗಿತ್ತು. ಆದರೆ ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಈ ನೀರು ಹರಿದು ಬರುತ್ತಿದೆ. ಶನಿವಾರ ಮಧ್ಯಾಹ್ನ 45 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿದ್ದರಿಂದಾಗಿ ಹೊರ ಹರಿವಿನ ಪ್ರಮಾಣವನ್ನು ಕೂಡ 49 ಸಾವಿರ ಕೂಸೆಕ್ಗೆ ಏರಿಕೆ ಮಾಡಲಾಗಿತ್ತು.

ಸಂಜೆಯಾಗುತ್ತಿದ್ದಂತೆ 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಮಾಹಿತಿ ಲಭ್ಯವಾಗಿದ್ದರಿಂದಾಗಿ ಜಲಾಶಯದ ಮಟ್ಟ 492.23 ಕಾಯ್ದುಕೊಂಡು 20 ಕ್ರಸ್ಟ್ಗೇಟ್ಗಳ ಮೂಲಕ 80 ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಜಲಾಶಯ ವಿಭಾಗದ ಸಹಾಯಕ ಎಂಜಿನಿಯರ್ ವಿಜಯಕುಮಾರ ಅರಳಿ ಮಾಹಿತಿ ನೀಡಿದರು.

ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿ ತೀರಕ್ಕೆ ಜನ ಜಾನುವಾರುಗಳೊಂದಿಗೆ ತೆರಳಬಾರದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.