ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಜಯಂತಿ

Published 10 ಮೇ 2024, 15:59 IST
Last Updated 10 ಮೇ 2024, 15:59 IST
ಅಕ್ಷರ ಗಾತ್ರ

ಯಾದಗಿರಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸರಳ ಹಾಗೂ ಸಾಂಕೇತಿಕವಾಗಿ ಬಸವೇಶ್ವರ ಹಾಗೂ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಜಯಂತಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ‘ಜಗಜ್ಯೋತಿ ಬಸವಣ್ಣನವರ ಹಾಗೂ ಹೇಮರೆಡ್ಡಿ ಮಲ್ಲಮ್ಮನವರ ತತ್ವ ಆದರ್ಶಗಳು ಇಂದಿಗೂ ಬದುಕಿಗೆ ದಾರಿದೀಪವಾಗಿವೆ. ಭಕ್ತಿ ಭಂಡಾರಿ, ವಿಶ್ವಗುರು, ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತಂದು ಜನರಲ್ಲಿ ಜ್ಞಾನದ ದೀವಿಗೆ ಹಚ್ಚಿದ ಮಹಾನ್ ಮಾನವತಾವಾದಿ ಜಗಜ್ಯೋತಿ ಬಸವೇಶ್ವರರು‌’ ಎಂದು ಬಣ್ಣಿಸಿದರು.

ಸ್ತ್ರೀ ಕುಲಕ್ಕೆ ಮಾದರಿಯಾಗಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರಮೂರ್ತಿಯಾದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯೂ ಎಂದಿಗೂ ಆದರ್ಶಪ್ರಾಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಮುಖಂಡರಾದ ಶರಣಗೌಡ ಪೊಲೀಸ್ ಪಾಟೀಲ ಯಡ್ಡಳ್ಳಿ, ಸಾಹೇಬರೆಡ್ಡಿ ಬಿ ದೇಶಪಾಂಡೆ, ಜಗನ್ನಾಥರೆಡ್ಡಿ ಬೋರೆಡ್ಡಿ, ಶಿವಪ್ರಕಾಶಗೌಡ ಯಡ್ಡಳ್ಳಿ, ಸಾಹಿತಿ ವಿಶ್ವನಾಥರೆಡ್ಡಿ ಗೊಂದಡಗಿ, ಉಪನ್ಯಾಸಕ ಗುರುಪ್ರಸಾದ್ ವೈದ್ಯ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಭಗತ್ ವಾಡೇಕರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT