ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವೇಶ್ವರ ಮೂರ್ತಿ ವಿರೂಪ: ಕ್ರಮಕ್ಕೆ ಆಗ್ರಹ

ವೀರಶೈವ ಮಹಾಸಭಾ ಯುವ ಘಟಕದಿಂದ ಬೈಕ್ ರ್‍ಯಾಲಿ, ಪ್ರತಿಭಟನೆ
Last Updated 11 ನವೆಂಬರ್ 2020, 7:38 IST
ಅಕ್ಷರ ಗಾತ್ರ

ಯಾದಗಿರಿ: ಜಗಜ್ಯೋತಿ ಬಸವಣ್ಣನವರ ಮೂರ್ತಿಯನ್ನು ವಿರೂಪಗೊಳಿಸಿದ ಆರೋಪಿಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವೀರಶೈವ ಮಹಾಸಭಾ ಯುವ ಘಟಕದಿಂದ ನಗರದಲ್ಲಿ ಮಂಗಳವಾರ ಬೈಕ್ ರ್‍ಯಾಲಿ ನಡೆಸಲಾಯಿತು.

ಬೆಳಗಾವಿಯಲ್ಲಿ ಶನಿವಾರ ತಡರಾತ್ರಿ ದುಷ್ಕರ್ಮಿಗಳು ಬಸವಣ್ಣ ಮೂರ್ತಿಯನ್ನು ವಿರೂಪಗಳಿಸಿರುವುದನ್ನು ವಿರೋಧಿಸಿ ಅಖಿಲ ಭಾರತ ವೀರಶೈವ ಮಹಾಸಭೆ ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಅವಿನಾಶ ಜಗನ್ನಾಥ್ ನೇತೃತ್ವದಲ್ಲಿ ಯುವಕರು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್‍ಯಾಲಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಸಮಾನತೆ ಸಾರಿದ ಬಸವಣ್ಣನ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಅವಿನಾಶ ಜಗನ್ನಾಥ ಮಾತನಾಡಿ, ಬಸವೇಶ್ವರರ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ಮೂರ್ತಿಯನ್ನು ಪುನರ್ ಸ್ಥಾಪಿಸಬೇಕು. ನಿರ್ಲಕ್ಷ್ಯ ಮಾಡಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಆರ್.ಮಹಾದೇವಪ್ಪ ಅಬ್ಬೆತುಮಕೂರು, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ.ಸಿದ್ದಪ್ಪ ಹೊಟ್ಟಿ, ನೀಲಕಂಠ ಶೀಲವಂತ, ಇಂದುಧರ ಸಿನ್ನೂರ, ರಮೇಶ ದೊಡ್ಡಮನಿ, ರಾಜು ಉಪ್ಪಿನ್, ಶರಣು ಆಶನಾಳ, ಮಂಜುನಾಥ ಜಡಿ, ಶರಣು ಇಡ್ಲೂರು, ಶಿವಾನಂದ ವಾಲಿ, ಜಗದೀಶ ಜಾಕಾ, ಅಂಬ್ರೇಷ್ ಜಾಕಾ, ಮಲ್ಲಿಕಾರ್ಜುನ ಅರುಣಿ, ನಿರಂಜನ ಸಜ್ಜನ್, ಸಚಿನ್ ಬಾಪುರೆ, ಶಿವರಾಜ ಕಲಿಕೇರಿ, ಸಿದ್ದು ಪಾಟೀಲ್, ವೀರೇಶ ದುಗನೂರ, ವೀರೇಶ ನೆಲೋಗಿ, ವಿಶ್ವನಾಥ ಕೋರಿ, ಭರತ, ಅಶೋಕ ದೇವಿಶೆಟ್ಟಿ, ಶರಣು ಪಡಶೆಟ್ಟಿ, ವಿರೇಶ ಪುಲಮಾಮಿಡಿ, ಸೋಮು ಸಾಹುಕಾರ, ಮಂಜುನಾಥ ದೋತರಬಂಡಿ, ವೀರೇಶ, ಜಗದೀಶ, ಶಂಕರಗೌಡ ಮಲ್ಹಾರ ಇದ್ದರು.

ನಂತರ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT