ನಾರಾಯಣಪುರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಪೂಜಾರಿ ದೀಡಿರ್ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ನಿಂದಾದ ಹಿನ್ನೆಡೆಯನ್ನು ಕಲಿಕಾ ಚೇತರಿಕೆ ಕಲಿಕಾ ಹಬ್ಬದಂತಹ ವಿಶೇಷ ಕಾರ್ಯಕ್ರಮಗಳ ಮೂಲಕ ಸರಿಪಡಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶ ಹೆಚ್ಚಿಸುವದು, ಪರೀಕ್ಷೆ ಕುರಿತು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ತಿಳಿಸುವದು, ಎಲ್ಲ ವಿಷಯಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಲಿಕೆ ಕುರಿತು ನಿಗಾವಹಿಸಬೇಕು, ವಿಷಯವಾರು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಗಮನಹರಿಸಬೇಕು ಎಂದರು.
ಪರೀಕ್ಷಾ ಸಮಯವಾಗಿದ್ದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಬಹಳ ಮಹತ್ವ ನೀಡಬೇಕು, ನಿಯಮಿತ ಓದು, ಶುದ್ದ ಬರಹಕ್ಕೆ ಆದ್ಯತೆ ನೀಡಿ ಉತ್ತಮ ಅಂಕಗಳಿಸುವ ಗುರಿ ಇರಲಿ. ಪರೀಕ್ಷೆ ಹಾಗೂ ಪಠ್ಯ ವಿಷಯಗಳ ಸಮಸ್ಯೆ ಗೊಂದಲಗಳ ಕುರಿತು ತರಗತಿ ಹಾಗೂ ವಿಷಯವಾರು ಶಿಕ್ಷಕರಿಂದ ಸಮಸ್ಯೆ ಪರಿಹರಿಸಿಕೊಳ್ಳಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು ಹೆಚ್ಚುವರಿ ಶಿಕ್ಷಕರು ಖಾಲಿ ಇರುವ ದೈಹಿಕ ಶಿಕ್ಷಕರ ನಿಯೋಜನೆಗೆ, ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಿಸುವ ಬಗ್ಗೆ ಸಲಹೆ ನೀಡಿದ್ದೇನೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.