ಶನಿವಾರ, ಜುಲೈ 24, 2021
20 °C

ಯಾದಗಿರಿ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಉತ್ತಮ ಮಳೆಯಾಗಿದೆ. ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಇತ್ತು.

ಕೆಲ ಕಡೆ ಮಳೆ ಇಲ್ಲದಿದ್ದರಿಂದ ಬಿತ್ತಿರುವ ಬೀಜಕ್ಕೆ ತೇವಾಂಶದ ಕೊರತೆಯಾಗಿತ್ತು. ಇದು ರೈತರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಮಳೆಯಿಂದ ಸಮಸ್ಯೆ ನಿವಾರಣೆಯಾದಂತೆ ಆಗಿದೆ.

ನಗರದ ಗಾಂಧಿ ವೃತ್ತದ ಸಮೀಪ ತಗ್ಗು ಪ್ರದೇಶದಲ್ಲಿ ನೀರು ನಿಂತಿತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಯಿತು. ಸುರಪುರದಲ್ಲಿ ಸಾಧಾರಣ ಮಳೆಯಾಗಿದೆ. ಶಹಾಪುರ ದಲ್ಲಿ ಕೆಲ ಹೊತ್ತು ಉತ್ತಮ ಮಳೆಯಾ ಗಿದ್ದು, ಸೈದಾಪುರ, ಗುರುಮಠಕಲ್‌ನಲ್ಲಿ ತುಂತುರು ಮಳೆಯಾಗಿದೆ. ಅಲ್ಲಿಪುರ, ಹತ್ತಿಕುಣಿ ಗ್ರಾಮದಲ್ಲಿ ಮಳೆ ಸುರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.