ಗುರುವಾರ , ಅಕ್ಟೋಬರ್ 1, 2020
20 °C
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಜಿ.ಪಂ ಅಧ್ಯಕ್ಷ ಬಸನಗೌಡ ಯಡಿಯಾಪುರ ಅಭಿಮತ

ಯಾದಗಿರಿ: 'ಶೈಕ್ಷಣಿಕ ಪ್ರಗತಿಯಿಂದ ಉತ್ತಮ ಸಮಾಜ ನಿರ್ಮಾಣ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಲು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಹೆಚ್ಚಿನ ಒತ್ತು ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಹೇಳಿದರು.

ನಗರದ ಮೆಥೋಡಿಸ್ಟ್ ಚರ್ಚ್ ಕೆಎನ್‌ಎಚ್ ಹಾಲ್‍ನಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾತನಾಡಿ, ‘ಮಕ್ಕಳ ಭವಿಷ್ಯ ರೂಪಿಸಿ ಅಮೂಲ್ಯ ರತ್ನಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದಿಂದ ಸ್ವಾವಲಂಬಿಯಾಗಿ ಬದುಕಲು ಕಲಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿದರು.

ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸಿದ ಸ್ಕೌಟ್ಸ್ ಮತ್ತು ಗೈಡ್ಸ್ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಡಿಡಿಪಿಐ ಶ್ರೀನಿವಾಸರಡ್ಡಿ, ಡಯಟ್ ಕಾಲೇಜಿನ ಪ್ರಾಂಶುಪಾಲ ನಾಗರತ್ನ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರಡ್ಡಿ ಪಾಟೀಲ, ಶಿಕ್ಷಣಾಧಿಕಾರಿ ಚಂದ್ರಕಾಂತ ರಡ್ಡಿ, ಹಳ್ಳೆಪ್ಪ, ಅಶೋಕ ಕೆಂಭಾವಿ, ಲಕ್ಷ್ಮಿಕಾಂತ ರೆಡ್ಡಿ ಇದ್ದರು. ಸಂಗೀತ ಶಿಕ್ಷಕ ಶರಣಬಸವ ವಠಾರ ನಾಡಗೀತೆ ಹಾಡಿ ದರು. ಮಲ್ಲಿಕಾರ್ಜುನ ವಂದಿಸಿದರು.

***

ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ. ಗುರು ನಿರಂತರವಾಗಿ ಓದುಗನಾಗಿರಬೇಕು ಅಂದಾಗ ಮಾತ್ರ ಶಿಷ್ಯರೂ ನಿರಂತರ ಓದುಗರಾಗಿರುತ್ತಾರೆ

- ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.