ಶುಕ್ರವಾರ, ಜುಲೈ 30, 2021
20 °C
ಮಾನವೀಯತೆ ಮೆರೆದ ಯಾದಗಿರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ

ಬೈಕ್– ಟಿಪ್ಪರ್ ಡಿಕ್ಕಿ: ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯರಗೋಳ: ವೆಂಕಟೇಶನಗರ ಬಳಿಯ ಯಾದಗಿರಿ–ವಾಡಿ ಮುಖ್ಯ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೈಕ್ ಹಾಗೂ ಟಿಪ್ಪರ್ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರು ಚಿತ್ತಾಪುರ ತಾಲ್ಲೂಕಿನ ಸೂಗುರ (ಎನ್) ಗ್ರಾಮದವರು.

ಇಬ್ಬರು ಮಹಿಳೆಯರು ಮತ್ತು ಯುವಕ ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಕಲಬುರ್ಗಿಯಿಂದ ಯಾದಗಿರಿಗೆ ತೆರಳುತ್ತಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಅವರು ಗಾಯಾಳುಗಳನ್ನು ಗಮನಿಸಿ ಅವರಿಗೆ ನೀರು ಕುಡಿಸಿ ಉಪಚರಿಸಿದ್ದಾರೆ. ನಂತರ ಆರೋಗ್ಯಾಧಿಕಾರಿಗಳೊಂದಿಗೆ ಮಾತನಾಡಿ ಆಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು