ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಬೈಕ್‌ಗೆ ಟಿಪ್ಪರ್ ಡಿಕ್ಕಿ; ಒಬ್ಬ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಭಾವಿ: ಇಲ್ಲಿನ ಸುರಪುರ-ಹುನಗುಂದ ರಾಜ್ಯ ಹೆದ್ದಾರಿಯ ಸಂಜೀವ ನಗರದ ಬಳಿ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಒಬ್ಬ ಬೈಕ್‌ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.

ಕಾಚಾಪೂರ ಗ್ರಾಮದ ದೇವಪ್ಪ ಮನ್ನಾಪೂರ (29) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮೈಲಾರಿ ಎಂಬಾತನನ್ನು ಕಲಬುರ್ಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ಸಂತೆಗೆ ಬಂದಿದ್ದ ಇಬ್ಬರು ಸಂಜೆ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಹಿಂಬದಿಯಿಂದ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡು ದೇವಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದಾರೆ ಎಂದು ಪಿಎಸ್‍ಐ ಗಜಾನಂದ ಬಿರಾದಾರ ತಿಳಿಸಿದ್ದಾರೆ.

ಸಿಪಿಐ ಎನ್.ಕೆ.ದೌಲತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.