ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ

ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಸರಳವಾಗಿ ಆಚರಣೆ
Last Updated 5 ಏಪ್ರಿಲ್ 2020, 14:50 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ದೇಶದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 113ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಸರಳವಾಗಿ ಆಚರಣೆ ಮಾಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಜ್ಯೋತಿ ಬೆಳಗಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಪ್ರಯುಕ್ತ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಡಾ.ಬಾಬು ಜಗಜೀವನರಾಂ ರವರ ಜನ್ಮ ದಿನಾಚರಣೆಯನ್ನು ಸರಳವಾಗಿ ಹೆಚ್ಚಿನ ಜನಸಂದಣಿ ಇಲ್ಲದಂತೆ ಆಚರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಏಪ್ರಿಲ್ 14ರ ಮಧ್ಯರಾತ್ರಿಯವರೆಗೆ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕರು ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರಬಾರದು. ಅಗತ್ಯ ವಸ್ತುಗಳ ಖರೀದಿಗೆ ಹೋದಾಗ ಸಾಮಾಜಿಕ ಅಂತರ ಕಾಪಾಡಬೇಕು. ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕೆಂದು ವೇಳೆ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಚನ್ನಬಸವ, ಸಮಾಜದ ಮುಖಂಡರಾದ ದೇವಿಂದ್ರನಾಥ, ಲಿಂಗಪ್ಪ ಹತ್ತಿಮನಿ, ಚನ್ನಯ್ಯ ಮಾಳಿಕೇರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT