ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಹುದ್ದೆ ನೀಡುವ ಏಕೈಕ ಪಕ್ಷ ಬಿಜೆಪಿ: ಮುನಿರಾಜುಗೌಡ

ಕಾರ್ಯಕರ್ತರ ಶ್ರಮ ವ್ಯರ್ಥವಾಗಲ್ಲ
Last Updated 13 ಜುಲೈ 2021, 4:59 IST
ಅಕ್ಷರ ಗಾತ್ರ

ಯಾದಗಿರಿ: ‘ರಾಜ್ಯ, ಜಿಲ್ಲೆ, ಕ್ಷೇತ್ರ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಲು ಯಾರು ಕೆಲಸ ಮಾಡುತ್ತಿದ್ದಾರೆ ಎಂಬ ಇಂಚಿಂಚೂ ಮಾಹಿತಿ ವರಿಷ್ಠರಿಗೆ ತಲುಪಿಸುವ ಬಹುದೊಡ್ಡ ತಂಡ ಪಕ್ಷದೊಳಗಿದ್ದು, ಗುಪ್ತಗಾಮಿನಿಯಾಗಿ ಕೆಲಸ ಮಾಡುತ್ತಿದೆ’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜುಗೌಡ ತಿಳಿಸಿದರು.

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ ಎಂದರೆ ಅದಕ್ಕೆ ಕಾರ್ಯಕರ್ತರ ಶಕ್ತಿಯೇ ಕಾರಣ. ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಹುದ್ದೆ ನೀಡುವ ಏಕೈಕ ಪಕ್ಷ ಯಾವುದಾದರೂ ಇದ್ದರೆ ಅದು ಕೇವಲ ಬಿಜೆಪಿ ಮಾತ್ರ’ ಎಂದರು.

‘ಪಕ್ಷದ ಸಂಘಟನೆಗಾಗಿ ನಿಷ್ಠೆಯಿಂದ ದುಡಿದ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ ವಿಫಲವಾಗಲು ನಮ್ಮ ನಾಯಕರು ಬಿಡುವುದಿಲ್ಲ’ ಎಂದರು.

ಶಾಸಕ ನರಸಿಂಹ ನಾಯಕ (ರಾಜೂಗೌಡ) ಮಾತನಾಡಿ, ‘ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ರಾಜ್ಯದ ಎಲ್ಲ ಭಾಗಕ್ಕೆ ನ್ಯಾಯ ಒದಗಿಸಿ ಕೊಡುವ ಕೆಲಸ ಪಕ್ಷ ಮಾಡಿದೆ. ಸಂಪುಟದಿಂದ ಹೊರ ಬಂದವರು ಎಲ್ಲಿಯೂ ಅಸಮಾಧಾನ ವ್ಯಕ್ತಪಡಿಸಲಿಲ್ಲ. ಇದು ನಮ್ಮ ಪಕ್ಷದ ಶಿಸ್ತು ಮತ್ತು ಸಿದ್ಧಾಂತ. ಕೊರೊನಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರಾಣವನ್ನು ಪಣಕ್ಕಿಟ್ಟು ಹೋರಾಟ ಮಾಡಿದ್ದಾರೆ’ ಎಂದರು.

ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ‘ದೇಶದಲ್ಲಿ ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷವಾಗಿ ಉಳಿದುಕೊಂಡಿದೆ. ನಮ್ಮ ಪಕ್ಷದ ಆಡಳಿತದ ಬಗ್ಗೆ ಟೀಕಿಸುವ ನೈತಿಕತೆ ಕಾಂಗ್ರೆಸ್‍ಗೆ ಉಳಿದಿಲ್ಲ’
ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಮಾತನಾಡಿ, ‘ಬಿಜೆಪಿ ಎಂದರೆ ಅದು ಶಿಸ್ತಿನ ಪಕ್ಷ. ದೇಶ ಮತ್ತು ರಾಜ್ಯದ ಅಭಿವೃದ್ಧಿಗಾಗಿ ನಮ್ಮ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುತ್ತಾರೆ’ ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ ಮಾತನಾಡಿ, ‘ಪಕ್ಷದ ಕಾರ್ಯಕರ್ತರು ಸಂಘಟನಾತ್ಮಕವಾಗಿ ಕೆಲಸ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಎದುರಾಗಲಿರುವ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಗೆಲ್ಲಿಸಲು ಇಂದಿನಿಂದಲೇ ಸಜ್ಜಾಗಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಉದ್ಘಾಟಿಸಿದರು.

ಪಕ್ಷದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರು, ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಮಾತನಾಡಿದರು.

ಡಾ.ವೀರಬಸವಂತರಡ್ಡಿ ಮುದ್ನಾಳ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಅಮೀನರಡ್ಡಿ ಯಾಳಗಿ, ಸಾಯಿಬಣ್ಣ ಬೋರಬಂಡಾ, ನಾಗರತ್ನ ಕುಪ್ಪಿ, ಲಲಿತಾ ಅನಪುರ, ದೇವಿಂದ್ರನಾಥ ನಾದ, ಯೂಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಸುಜಾತ ಜೇವರ್ಗಿ, ಉಪಾಧ್ಯಕ್ಷೆ ಪ್ರಭಾವತಿ ಕಲಾಲ, ಮಹೇಶ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ), ಜಿಲ್ಲಾ ವಕ್ತಾರ ಎಚ್.ಸಿ.ಪಾಟೀಲ, ಮಾಧ್ಯಮ ವಕ್ತಾರ ವಿರೂಪಾಕ್ಷಯ್ಯ ಸ್ವಾಮಿ ಇದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೆತುಮಕೂರ ನಿರೂಪಿಸಿದರು. ಗುರು ಕಾಮಾ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT