ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ನಾಳೆ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ಮೋದಿ

ಜಿಲ್ಲಾ ಬಿಜೆಪಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಹೇಳಿಕೆ
Last Updated 4 ಮಾರ್ಚ್ 2019, 14:38 IST
ಅಕ್ಷರ ಗಾತ್ರ

ಯಾದಗಿರಿ: ‘ಮಾರ್ಚ್6 ರಂದು ಬೆಳಿಗ್ಗೆ 9.30ಕ್ಕೆ ಕಲಬುರ್ಗಿ ನೂತನ ಮಹಾವಿದ್ಯಾಲಯ ಮೈದಾನದಲ್ಲಿ ಪಕ್ಷ ಹಮ್ಮಿಕೊಂಡಿರುವ ಬೃಹತ್‌ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ’ ಎಂದು ಜಿಲ್ಲಾ ಬಿಜೆಪಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ತಿಳಿಸಿದರು.

ನಗರದದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಹೈದರಾಬಾದ್‌ ಕರ್ನಾಟಕದ 19 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಬೂತ್‌ಮಟ್ಟದಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿ,‘ಹೈದರಾಬಾದ್ ಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ ಎಂದ ಅವರು, ಮೋದಿ ಅವರು ಕಳೆದ ಐದು ವರ್ಷಗಳಿಂದ ದೇಶದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸಿ ಎಲ್ಲ ಕ್ಷೇತ್ರಗಳಲ್ಲಿ ಬದಲಾವಣೆಗೆ ಶ್ರಮಿಸಿದ್ದಾರೆ. ಅವರ ಆಡಳಿತವನ್ನು ದೇಶದ ಜನರು ಮುಕ್ತ ಕಂಠದಿಂದ ಹೊಗಳುತ್ತಿದ್ದಾರೆ. ಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಬಾಬುರಾವ ಚಿಂಚನಸೂರ್‌ ಮಾತನಾಡಿ,‘ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್‌ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಉಮೇಶ ಜಾದವ್ ಅವರನ್ನು ಪಕ್ಷ ಕಣಕ್ಕಿಳಿಸಲಿದೆ. ಶಾಸಕ ವೆಂಕಟರಡ್ಡಿ ಮುದ್ನಾಳ ಹಾಗೂ ಇತರ ಮುಖಂಡರ, ಕಾರ್ಯಕರ್ತರ ಶ್ರಮದಿಂದ ಜಾದವ್ ಅವರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದರು.

‘ಜಾದವ್ ಅವರಿಗೆ ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಗುಣವಿದೆ. ಮಲ್ಲಿಕಾರ್ಜನ ಖರ್ಗೆ, ಅವರ ಅಳಿಯ ಮತ್ತು ಅವರ ಅನುಯಾಯಿಗಳು ನನ್ನ ಸೋಲಿಗೆ ಕಾರಣರಾಗಿದ್ದಾರೆ. ಅವರ ವಿರುದ್ಧ ಸೇಡು ತೀರಿಸಿಕೊಳ್ಳಬೇಕಿದೆ. ಖರ್ಗೆ ಅವರಿಂದ ಅನ್ಯಾಯಕ್ಕೊಳಗಾಗಿರುವ ನಾಯಕರು ಈಗ ಒಂದಾಗಿದ್ದಾರೆ. ಖರ್ಗೆ ಸೋಲು ನಿಶ್ಚಿತ ’ ಎಂದರು.

ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಡಾ.ಶರಣಭೂಪಾಲರೆಡ್ಡಿ ನಾಯ್ಕಲ್, ನಾಗರತ್ನಾ ಕುಪ್ಪಿ, ದೇವಿಂದ್ರನಾಥ ನಾದ, ಖಂಡಪ್ಪ ದಾಸನ, ನರಸಿಂಹಲು ನೀರಟ್ಟಿ, ಶರಣಗೌಡ ಬಾಡಿಯಾಳ, ಎಸ್.ಪಿ.ನಾಡೇಕಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT