ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ರೈತರ ಧ್ವನಿಯಾಗಿ ಕ್ಷೇತ್ರಕ್ಕಾಗಿ ದುಡಿಯುತ್ತೇನೆ’

Published 5 ಜೂನ್ 2024, 16:13 IST
Last Updated 5 ಜೂನ್ 2024, 16:13 IST
ಅಕ್ಷರ ಗಾತ್ರ

ಹುಣಸಗಿ: ‘ಯಾವುದೇ ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಅದರಂತೆ ಈ ಉಪಚುನಾವಣೆಯಲ್ಲಿನ ಸೋಲನ್ನು ಸಮತಾಭಾವದಿಂದ ಸ್ವೀಕರಿಸುತ್ತೇನೆ’ ಎಂದು ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ (ರಾಜೂಗೌಡ) ಹೇಳಿದರು.

ಈ ಕುರಿತು ಬುಧವಾರ ಪತ್ರಿಕೆಯೊಂದಿಗೆ ಮಾತನಾಡಿ, ‘ಕಳೆದ ವಿಧಾನಸಭಾ ಚುನಾವಣೆಗಿಂತ ಈ ಬಾರಿ 8ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡುವ ಮೂಲಕ ನನಗೆ ಮತದಾರರು ಆಶೀರ್ವದಿಸಿದ್ದಾರೆ. ಅಲ್ಲದೇ ಸುರಪುರ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದರಿಂದಾಗಿ ಇಷ್ಟು ಹೆಚ್ಚು ಮತಗಳು ಬರಲು ಸಾಧ್ಯವಾಯಿತು. ಆದರೆ ಗ್ಯಾರಂಟಿ ಯೋಜನೆ ಹಾಗೂ ಹಿಂದಿನ ಶಾಸಕರ ನಿಧನದ ಅನುಕಂಪದ ಅಲೆಗೆ ಮತದಾರರು ಆಶೀರ್ವದಿಸಿದ್ದಾರೆ’ ಎಂದರು.

‘ನಾನು ಕ್ಷೇತ್ರದಲ್ಲಿದ್ದುಕೊಂಡು ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದುಕೊಂಡು ರೈತರ ಪರವಾಗಿ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಹಾಗೂ ಅನುಕಂಪದಿಂದ ಸೋತಿದ್ದರೂ ಪಕ್ಷ ಸಂಘನೆಗೆ ಒತ್ತು ನೀಡುತ್ತೇನೆ’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT