ಬುಧವಾರ, ಡಿಸೆಂಬರ್ 7, 2022
23 °C

‘ಆನೆಕಾಲು ರೋಗ ನಿಯಂತ್ರಣಕ್ಕೆ ಸಹಕರಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ಆನೆಕಾಲು ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ 19 ವರ್ಷಗಳಿಂದ ಶ್ರಮಿಸುತ್ತಿದೆ, ಆದರೆ ಜನರ ನಿರ್ಲಕ್ಷದಿಂದ ಸಂಪೂರ್ಣ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು ಕಡ್ಡಾಯವಾಗಿ ಮಾತ್ರೆ ನುಂಗಿ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಶಾಸಕ ರಾಜೂಗೌಡ ತಿಳಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮಾತ್ರೆ ಸೇವಿಸಿ ಮಾತನಾಡಿದರು.

ಮಾತ್ರೆ ಬಗ್ಗೆ ಬಹುತೇಕರಲ್ಲಿ ತಪ್ಪು ಕಲ್ಪನೆ ಇದೆ. ದೇವರ ಶಾಪ ಎಂದು ಹರಕೆ ಹೊರುವುದು ಸರಿಯಲ್ಲ, ಇದೆಲ್ಲ ಮೌಡ್ಯ ಇದೇ ಕಾರಣದಿಂದ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ಮಾತ್ರೆ ನುಂಗುವುದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ, ಸ್ವತಃ ನಾನು ನುಂಗಿದ್ದೇನೆ ಅನುಮಾನ ಬೇಡ ಎಂದು ಜಾಗೃತಿ ಮೂಡಿಸಿದರು.

ಜಿಲ್ಲಾಧಿಕಾರಿ ಡಾ.ಸ್ನೇಹಲ್. ಆರ್., ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ. ನಾಯಕ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು