ಗುರುವಾರ , ಅಕ್ಟೋಬರ್ 22, 2020
22 °C
ಮಿತ್ರ ಚಾರಿಟಬಲ್ ಟ್ರಸ್ಟ್‌ ಯುವಕರ ಕಾರ್ಯ ಶ್ಲಾಘನೀಯ: ಸಿದ್ಧಲಿಂಗ ಶ್ರೀ

ನಾಲ್ವರು ಶ್ರೀಗಳು ಸೇರಿ ಹಲವರಿಂದ ರಕ್ತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೈದಾಪುರ: ಕೊರೊನಾದಂತಹ ಕಠಿಣ ಪರಸ್ಥಿತಿಯಲ್ಲಿಯೂ ಮಿತ್ರ ಚಾರಿಟಬಲ್ ಟ್ರಸ್ಟ್‌ನ ಯುವಕರು ಶ್ಲಾಘನೀಯ ಕೆಲಸ ಮಾಡಿದ್ದಾರೆ ಎಂದು ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದ ಪೀಠಾಧಿಪತಿ ಪಂಚಮ ಸಿದ್ಧಲಿಂಗ ಸ್ವಾಮಿಗಳು ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರು ಶಾಸ್ತ್ರಿ ಅವರ ಜಯಂತಿಯ ಅಂಗವಾಗಿ ಮಿತ್ರ ಚಾರಿಟಬಲ್ ಟ್ರಸ್ಟ್ (ರಿ) ಹಾಗೂ ಡಾ.ಸುರಗಿಮಠ ರಕ್ತ ನಿಧಿ ಕೇಂದ್ರ ಯಾದಗಿರಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸತ್ಯ ಮತ್ತು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಹಾಗೂ ಪ್ರಧಾನಿಯಾಗಿ ದಕ್ಷ ಹಾಗೂ ಪ್ರಾಮಾಣಿಕ ಸೇವೆಯಿಂದ ಆದರ್ಶ ವ್ಯಕ್ತಿತ್ವ ಹೊಂದಿದ್ದ ಲಾಲ್ ಬಹಾದ್ದರೂ ಶಾಸ್ತ್ರಿ ಅವರಂತಹ ಮಹಾನ್ ನಾಯಕರ ನಿಷ್ಕಳಂಕ ವ್ಯಕ್ತಿತ್ವ ಅನುಕರಣೀಯ ಎಂದರು.

ಡಾ.ಎಸ್.ಆರ್. ಸುರಗಿಮಠ ರಕ್ತದಾನದಿಂದ ಆಗುವ ಉಪಯೋಗಗಳ ಬಗ್ಗೆ ತಿಳಿಸಿದರು. ಇದಕ್ಕೂ ಮುಂಚೆ ಕೊರೊನಾ ವಾರಿಯರ್ಸ್‌ ಆಗಿ ಕಾರ್ಯ ನಿರ್ವಹಿಸಿದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಶಿಬಿರದಲ್ಲಿ ವಿಶೇಷವಾಗಿ ನಾಲ್ವರು ಸ್ವಾಮಿಜಿಗಳು, ಯುವಕರು, ವಯಸ್ಕರು ಸೇರಿದಂತೆ ಹಲವು ಜನರು ರಕ್ತದಾನ ಮಾಡಿದರು.

ವಿಜಯಕುಮಾರ ದೇವರು, ಸಿದ್ಧರಾಮ ದೇವರು, ಚಂದ್ರಶೇಖರ ದೇವರು, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಕ್ಯಾತ್ನಾಳ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದಪ್ಪ ಕಾವಲಿ ಬಾಲಚೇಡ, ಆಯುಷ್ ವೈದ್ಯಾಧಿಕಾರಿ ಡಾ.ಪ್ರಮೋದ ಕುಲಕರ್ಣಿ, ಪಿಎಸ್‍ಐ ಸುವರ್ಣ ಮಾಲಶಟ್ಟಿ, ನಿವೃತ್ತ ಮುಖ್ಯಶಿಕ್ಷಕ ಬಿ.ಬಿ ಹೆಬ್ಬಾಳೆ, ಲಿಂಗಾರೆಡ್ಡಿ ನಾಯಕ, ಶಿವರಾಜಪ್ಪ ಮೇದಾ, ಟ್ರಸ್ಟ್‌ ಅಧ್ಯಕ್ಷ ರಾಘವೇಂದ್ರ ಕಲಾಲ್ ಹಾಗೂ ಸದಸ್ಯರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು