ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಸಮಾವೇಶದ ಯಶಸ್ವಿಗೆ ಸಹಕರಿಸಿ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಆಂಜನೇಯ
Last Updated 2 ಏಪ್ರಿಲ್ 2018, 9:03 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳ ಅಪೇಕ್ಷೆಯಂತೆ ಜಿಲ್ಲೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರೆಸುತ್ತಿದ್ದು, ಇದೇ 4ರಂದು ಹೊಳಲ್ಕೆರೆಯಲ್ಲಿ ನಡೆಯುವ ‘ಜನಾಶೀರ್ವಾದ ಸಮಾವೇಶ’ದಲ್ಲಿ ಅವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್. ಆಂಜನೇಯ ತಿಳಿಸಿದರು.ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಭಾನುವಾರ ನಗರದ ಜಿ.ಜಿ.ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಕಳೆದ ತಿಂಗಳು ಹೊಳಲ್ಕೆರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಳಲ್ಕೆರೆಗೇ ಕರೆಸಬೇಕೆಂದು ಕ್ಷೇತ್ರದ ಜನರು ಒತ್ತಾಯಿಸಿದ್ದರು. ಅವರ ಒತ್ತಾಸೆಯ ಮೇರೆಗೆ ರಾಹುಲ್ ಗಾಂಧಿ ಬರುತ್ತಿದ್ದಾರೆ ಎಂದರು.

‘ಹೊಸದುರ್ಗ, ಹೊಳಲ್ಕೆರೆ ಎರಡೂ ಜೋಡಿ ಕ್ಷೇತ್ರಗಳು. ಶಾಸಕ ಬಿ.ಜಿ.ಗೋವಿಂದಪ್ಪ ಅವರು ಹೆಚ್ಚು ಜನರನ್ನು ಸೇರಿಸುವ ಪ್ರಯತ್ನ ಮಾಡಬೇಕು. ಚಳ್ಳಕೆರೆಯಿಂದ ರಘುಮೂರ್ತಿ, ಮೊಳಕಾಲ್ಮುರು ಭಾಗದಿಂದ ಬಳ್ಳಾರಿ ಗ್ರಾಮಾಂತರ ಶಾಸಕ ಎನ್. ವೈ. ಗೋಪಾಲಕೃಷ್ಣ ಅವರು ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಕರೆತರುತ್ತಾರೆ. ಚಿತ್ರದುರ್ಗದಲ್ಲಿ ಉತ್ತಮ ನಾಯಕರಿದ್ದಾರೆ. ಅವರಿಗೆ ಜನರನ್ನು ಸೇರಿಸುವುದು ಕಷ್ಟವಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.‘ಬಿಜೆಪಿಯವರು ಸುಳ್ಳನ್ನು ಸತ್ಯ ಮಾಡಿ ಹೇಳುವುದರಲ್ಲಿ ನಿಸ್ಸೀಮರು. ಕರ್ನಾಟಕದಲ್ಲಿ ಗೆಲುವು ಪಡೆಯಬೇಕೆಂಬ ಉದ್ದೇಶದಿಂದ ಬಿಜೆಪಿಯವರು ಏನೇನೋ ಕುತಂತ್ರ ನಡೆಸಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾವು ರಾಜ ಮಾರ್ಗದಲ್ಲಿ ಸಾಗುವ ಮೂಲಕ ಗೆಲುವು ಪಡೆಯಬೇಕು’ ಎಂದು ಹೇಳಿದರು.

ಜಿಲ್ಲಾ ಚುನಾವಣಾ ಉಸ್ತುವಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ವಿ.ವೆಂಕಟೇಶ್ ಮಾತನಾಡಿ, ‘ಭಿನ್ನಾಭಿಪ್ರಾಯಗಳು ಸಾಮಾನ್ಯ. ಆದರೆ ಅವೆಲ್ಲವನ್ನೂ ಬದಿಗಿಟ್ಟು, ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದರು.ಜಿಲ್ಲಾಧ್ಯಕ್ಷ ಫಾತ್ಯರಾಜನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ಬಿ.ಎನ್.ಚಂದ್ರಪ್ಪ, ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಹಾಲೇಶ್, ಮುಖಂಡರಾದ ಬಿ.ಟಿ.ಜಗದೀಶ್, ಡಿ.ಎನ್.ಮೈಲಾರಪ್ಪ, ಸಂಪತ್‌ಕುಮಾರ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧಕ್ಷರಾದ ಮೀನಾಕ್ಷಿ, ರಾಜೇಂದ್ರಪ್ರಸಾದ್, ಮಧುಪಾಲೇಗೌಡ, ಗೋವಿಂದ ಸ್ವಾಮಿ, ಎಂ.ಜಯಣ್ಣ,  ಆಶ್ರಫ್ ಅಲಿ ಅವರೂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT