ಶೇ50 ರ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

7

ಶೇ50 ರ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

Published:
Updated:

ಯಾದಗಿರಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಕಟವಾಗಿರುವ ಎಲ್ಲಾ ಪ್ರಕಾರದ ಸಾಹಿತ್ಯದ ಪುಸ್ತಕಗಳನ್ನು ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಆಗಸ್ಟ್ ತಿಂಗಳ ಪೂರ್ತಿ ಶೇ 50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

ಕನ್ನಡ ಪುಸ್ತಕ ಪ್ರಾಧಿಕಾರವು ವ್ಯಕ್ತಿಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ ಹಾಗೂ ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ನ ತಿಂಗಳಲ್ಲಿ ಮಾತ್ರ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50ರ ರಿಯಾಯಿತಿಯಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ, ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಲಭ್ಯ ಇರುತ್ತವೆ.

ಪ್ರಾಧಿಕಾರದ ಪುಸ್ತಕಗಳನ್ನು ವೆಬ್‌ಸೈಟ್ www.kannadapustakapradhikara.com ನ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‌ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Tags: 

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !