ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಫಲಾನುಭವಿಗಳ ಕೊಳವೆ ಬಾವಿ ಕೊರೆಯಿಸುವ ಕಾರ್ಯಕ್ಕೆ ಸಚಿವ ಪೂಜಾರಿ ಚಾಲನೆ

Last Updated 6 ಫೆಬ್ರುವರಿ 2023, 6:06 IST
ಅಕ್ಷರ ಗಾತ್ರ

ಯಾದಗಿರಿ: ರಾಜ್ಯದ ಇತಿಹಾಸದಲ್ಲಿಯೇ ಇದೇ ಪ್ರಥಮ ಬಾರಿಗೆ ರೈತರು, ಗುತ್ತಿಗೆದಾರರು ಹಾಗೂ ಸರ್ಕಾರಿ ಇಲಾಖೆಗಳ ಮಧ್ಯೆ ಗೊಂದಲವಿಲ್ಲದೇ ರೈತರು ಇಷ್ಟಪಟ್ಟ ಗುತ್ತಿಗೆದಾರರಿಂದ ಕೊಳವೆ ಬಾವಿ ಕೊರೆಯಿಸುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಲ್ಲೂಕಿನ ಮುದ್ನಾಳ ಗ್ರಾಮದಲ್ಲಿ ಸೋಮವಾರ ಸರ್ವೆ ನಂಬರ್ 206/6 ರ ರೈತ ಈಶ್ವರಪ್ಪ ಮುದ್ನಾಳ ಅವರ 1 ಎಕರೆ 30 ಗುಂಟೆ ಜಮೀನಿನಲ್ಲಿ ಆದಿ ಜಾಂಬವ ಅಭಿವೃದ್ಧಿ ನಿಗಮದ ಸೌಲಭ್ಯದಡಿ ಕೊಳವೆ ಬಾವಿ ಕೊರೆಯಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೊಳವೆ ಬಾವಿ ಕೊರೆಯಿಸಿಕೊಳ್ಳುವ ರೈತ ಫಲಾನುಭವಿಗಳಿಗೆ ನೀರು ಲಭ್ಯವಾದ ತಕ್ಷಣ ರೈತರ ಖಾತೆಗೆ ಹಣ ಜಮೆಯಗಲಿದ್ದು, ಮೋಟಾರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲೂ ನೆರವಾಗುತ್ತಿದೆ ಎಂದು ಹೇಳಿದರು.

ಈ ವೇಳೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಅಲೆಮಾರಿ,ಅರೆಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವೇಂದ್ರನಾಥ ನಾದ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರೇಶ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಭುದೊರೆ, ಅಂಬೇಡ್ಕರ್ ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ಹರ್ಷ ಡಿ ಗಾವಂಕರ್, ನಿಗಮದ ಜಿಲ್ಲಾ ವ್ಯವಸ್ಥಾಪಕಿ ದೀಪಾ, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಮಹಾದೇವ ಅಸ್ಕಿ, ವಿಷಯ ನಿರ್ವಾಹಕ ಸಾಗರ್ ಸಜ್ಜನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT