ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಸರಳ ಆಚರಣೆಗೆ ನಿರ್ಧಾರ

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
Last Updated 6 ಸೆಪ್ಟೆಂಬರ್ 2019, 15:21 IST
ಅಕ್ಷರ ಗಾತ್ರ

ಯಾದಗಿರಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸೆಪ್ಟೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಜಯಂತ್ಯುತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಜಯಂತಿಯನ್ನು ಸರಳವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕೂಡ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಪ್ರವಾಹ ಸಂತ್ರಸ್ತರಿಗೆ ಜಯಂತಿ ಹಣ:
ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 29ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಈಡಿಗ ಸಮಾಜದ ಮುಖಂಡರು ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸುವ ಇಚ್ಛೆ ವ್ಯಕ್ತಪಡಿಸಿ ಜಯಂತಿ ಆಚರಣೆಗೆ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡುವ ಹಣವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಲು ನಿರ್ಣಯಿಸಿದ್ದಾರೆ. ಅದರಂತೆ ಯಾದಗಿರಿ ಜಿಲ್ಲೆಯ ಜಯಂತಿ ಆಚರಣೆ ಅನುದಾನ ಸಹ ನೀಡಲು ಜಿಲ್ಲಾ ಈಡಿಗ ಸಮಾಜದವರು ತಮ್ಮ ಸಹಮತ ವ್ಯಕ್ತಪಡಿಸಿದರು.

ಡಿವೈಎಸ್‍ಪಿ ಯು.ಶರಣಪ್ಪ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್, ವಿಕ್ರಂಸಿಂಗ್, ಸಮಾಜದ ಮುಖಂಡರಾದ ರಾಜಶೇಖರಗೌಡ ವಡಗೇರಾ, ಮಹಿಂದ್ರ ಅನಪೂರ, ರವೀಂದ್ರ ಮುಂಡರಗಿ, ಮಲ್ಲಿಕಾರ್ಜುನ ಕಲಾಲ್, ವಿರೇಂದ್ರ ಕಲಾಲ್, ದಂಡಯ್ಯ ಬಳಿಚಕ್ರ, ಶಿವಯ್ಯ ಬಳಿಚಕ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT