ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರ್ಜಿ ಆಹ್ವಾನ: ಒನ್ ಸ್ಟಾಪ್ ಸೆಂಟರ್, ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ

Published : 12 ಸೆಪ್ಟೆಂಬರ್ 2024, 15:47 IST
Last Updated : 12 ಸೆಪ್ಟೆಂಬರ್ 2024, 15:47 IST
ಫಾಲೋ ಮಾಡಿ
Comments

ಯಾದಗಿರಿ: ಒನ್ ಸ್ಟಾಪ್ ಸೆಂಟರ್ (ಸಖಿ) ಯೋಜನೆ ಅನುಷ್ಠಾನಗೊಳಿಸಲು ಹೊರಗುತ್ತಿಗೆ ಆಧಾರದ ಮೇರೆಗೆ ಕೇಂದ್ರ ನಿರ್ವಾಹಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒನ್ ಸ್ಟಾಪ್ ಸೆಂಟರ್ (ಸಖಿ) ಯೋಜನೆ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಕೇಂದ್ರ ನಿರ್ವಾಹಕರ ಹುದ್ದೆಯನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ವಿದ್ಯಾರ್ಹತೆ, ಅನುಭವ ಹಾಗೂ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ, ಗಣಕಯಂತ್ರ ನಿರ್ವಹಣೆಯಲ್ಲಿ ಪರಿಣಿತಿ, ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪರಿಪೂರ್ಣ ಹಿಡಿತವುಳ್ಳ ಮಹಿಳಾ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪುರ ರಸ್ತೆ, ಯಾದಗಿರಿ 585202, ದೂ.ಸಂ.08473 253739 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯೋಜನೆಗಳಡಿ ಸಹಾಯಧನ

ಯಾದಗಿರಿ: 2024-25ನೇ ಸಾಲಿನ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ತೋಟಗಾರಿಕೆ ಉಪ ನಿರ್ದೇಶಕ (ಜಿಲ್ಲಾ ಪಂಚಾಯತ್) ಶಿವುಕುಮಾರ ಅವರು ತಿಳಿಸಿದ್ದಾರೆ.

ಅರ್ಜಿ ನಮೂನೆ, ಆಧಾರ ಕಾರ್ಡ್‌ ಪ್ರತಿ , ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ ಪ್ರತಿ, ಪಹಣಿ ಸಲ್ಲಿಸಬೇಕು. ಬಾಳೆ, ದಾಳಿಂಬೆ, ಮಾವು, ಸೀಬೆ, ಡ್ರ್ಯಾಗನ್ ಪ್ರೂಟ್, ದ್ರಾಕ್ಷಿ ಮತ್ತು ಹೂವು ಹಾಗೂ ಹೈಬ್ರೀಡ್ ತರಕಾರಿ, ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿರಬೇಕು.

ಸಹಾಯಧನ ಪಡೆಯಲು ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಯಾದಗಿರಿ, ಶಹಾಪುರ, ಸುರಪುರ ಕಚೇರಿಗಳಿಗೆ ಸೆಪ್ಟೆಂಬರ್ 22ರೊಳಗೆ ಅರ್ಜಿ ಸಲ್ಲಿಸಬೇಕು. ಮೊದಲು ಸಲ್ಲಿಸಿದವರಿಗೆ ಮೊದಲ ಆದ್ಯತೆ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) 916457 0011, ಶಹಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) 8217490621, ಸುರಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) 8217748605 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವರ ಪ್ರವಾಸ ಇಂದಿನಿಂದ

ಯಾದಗಿರಿ: ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಸೆಪ್ಟೆಂಬರ್ 13, 15, ಹಾಗೂ 16, 17 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ತಿಳಿಸಿದ್ದಾರೆ.

ಸೆಪ್ಟೆಂಬರ್ 13ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಶಹಾಪುರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30ಕ್ಕೆ ಕಲಬುರಗಿಗೆ ಪ್ರಯಾಣ ಬೆಳೆಸುವರು.

ಸೆಪ್ಟೆಂಬರ್ 15ರ ಭಾನುವಾರ ಬೆಳಿಗ್ಗೆ 8.30 ಗಂಟೆಗೆ ಆಗಮಿಸಿ ಯಾದಗಿರಿ ನಗರದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಶಹಾಪುರ ನಗರದ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30ಕ್ಕೆ ಕಲಬುರಗಿಗೆ ಪ್ರಯಾಣ ಬೆಳೆಸುವರು.

ಸೆಪ್ಟೆಂಬರ್ 16ರ ಬೆಳಿಗ್ಗೆ 10 ಗಂಟೆಗೆ ಶಹಾಪುರ ನಗರದ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

ಸೆಪ್ಟೆಂಬರ್ 17ರ ಬೆಳಿಗ್ಗೆ 9 ಗಂಟೆಗೆ ಆಗಮಿಸಿ ಯಾದಗಿರಿ ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2024ರ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸುವರು. ನಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜಿಲ್ಲಾ ಸಹಕಾರ ಒಕ್ಕೂಟ (ಯೂನಿಯನ್) ಆಯೋಜಿಸಿರುವ ದ್ವಿತೀಯ ವಾರ್ಷಿಕ ಮಹಾಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ತನಂತರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲಾ ಮಟ್ಟದ ಪ್ರಶಸ್ತಿ ಅರ್ಜಿ ಆಹ್ವಾನ

ಯಾದಗಿರಿ: ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಅವರು ತಿಳಿಸಿದ್ದಾರೆ.

ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ ಯೊಜನೆಯಡಿ 2024-25ನೇ ಸಾಲಿಗೆ ಅಸಾಧಾರಣ ಸಾಧನೆ ಮಾಡಿದ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಿ ಸಾಧನೆ ಮಾಡಿರುವಂಥ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು 5ರಿಂದ 18 ವರ್ಷ ಒಳಗಿರಬೇಕು. ಮಕ್ಕಳಿಗೆ ಪ್ರತಿ ಕ್ಷೇತ್ರದಲ್ಲಿ ಇಬ್ಬರ ಮಕ್ಕಳಂತೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯ ಬಹುಮಾನ ₹10,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಈ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅದರ ಸಾಧನೆಯ ಪ್ರಶಸ್ತಿ ಪತ್ರಗಳು ಹಾಗೂ ದಿನ ಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಹೊಂದಿರಬೇಕು ಯೋಜನೆಯಡಿ ಅರ್ಹ ಮಕ್ಕಳಿಂದ ಪ್ರಶಸ್ತಿ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಣೆ ಸಂಖ್ಯೆ ಸಿ-17 ಸಿ-ಬ್ಲಾಕ್ ಒಂದನೇ ಮಹಡಿ ಜಿಲ್ಲಾ ಆಡಳಿತ ಭವನ ಸಂಕೀರ್ಣ ಚಿತ್ತಾಪೂರ ರಸ್ತೆ ಯಾದಗಿರಿ ಕಚೇರಿಯಿಂದ ಪಡೆದು ಭರ್ತಿಮಾಡಿ ಅಕ್ಟೋಬರ್ 5ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 91135 67035, 08743 253738 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸೌಲಭ್ಯ ಪಡೆಯಲು ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ: 2024-25ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರ ಅಡಿಯಲ್ಲಿ ಬರುವ ವಿವಿಧ ನಿಗಮಗಳ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಅವಧಿ ವಿಸ್ತರಿಸಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ಟಿ.ಪ್ರಿಯದರ್ಶಿನಿ ಅವರು ತಿಳಿಸಿದ್ದಾರೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಗೊಲ್ಲ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಹೊಲಿಗೆ ಯಂತ್ರ ವಿತರಣೆ ಯೋಜನೆ (ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಮಾತ್ರ), ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ಯಡಿ ಅರ್ಜಿ ಸಲ್ಲಿಸಬೇಕು. ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಆನ್‌ಲೈನ್ www.kaushalkar.com ನಲ್ಲಿ ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಕ್ಷೇಪಣೆಗೆ ಅವಕಾಶ:ಡಿಸಿ

ಯಾದಗಿರಿ: 2024-25 ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತೀವೃಷ್ಟಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಪ್ರಕಟಿಸಿದ್ದು ಆಕ್ಷೇಪಣೆಗಳು ಇದ್ದರೆ ಸಾರ್ವಜನಿಕರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ವೆಬ್ ಸೈಟ್ www.nic.yadgirನಲ್ಲಿ ಸೆಪ್ಟೆಂಬರ್ 11ರಂದು ಪ್ರಕಟಿಸಲಾಗಿದ್ದು, ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್‌, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲ್ಲೂಕು ಕಚೇರಿಗಳಲ್ಲಿ 7 ದಿನಗಳೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT