ಯಾದಗಿರಿ: ಲೈಂಗಿಕ ಹಗರಣದಲ್ಲಿ ಆರೋಪಿಯಾಗಿ ವಿದೇಶದಲ್ಲಿ ತಲೆಮರಿಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರ್ಕಾರ ಕರೆತಂದು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ಹಣಮಂತ ಲಿಂಗೇರಿ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಅವರು, ‘ಪ್ರಕರಣ ದಾಖಲಾಗಿ ಹಲವು ದಿನ ಕಳೆದರೂ ಇಲ್ಲಿಯವರೆಗೆ ಎಸ್ಐಟಿ ಅಧಿಕಾರಿಗಳ ನೋಟಿಸ್ಗೆ ಉತ್ತರ ನೀಡದೆ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. 196 ದೇಶಗಳಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಿದರೂ ಕೇಂದ್ರ ಸರ್ಕಾರ ಆರೋಪಿ ಪ್ರಜ್ವಲ್ ರೇವಣ್ಣನಿಗೆ ರಕ್ಷಣೆ ನೀಡುತ್ತಿದೆ’ ಎಂದು ಆರೋಪಿಸಿದ್ದಾರೆ.

‘ಇಡೀ ದೇಶವೇ ರಾಜ್ಯದ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ದಿನಕ್ಕೊಂದು ಹೇಳಿಕೆ ನೀಡುತ್ತಾ ಪ್ರಕರಣವನ್ನು ದಾರಿ ತಪ್ಪಿಸುವಂತೆ ಮಾಡುತ್ತಿದ್ದಾರೆ. ಅಧಿಕಾರಿಗಳು ನ್ಯಾಯ ಸಮ್ಮತವಾಗಿ ತನಿಖೆ ಮಾಡಲು ಅನುವು ಮಾಡಿಕೊಡಬೇಕು. ವಿನಾಃಕಾರಣ ಮುಖ್ಯಮಂತ್ರಿಗಳನ್ನು ಉಪ ಮುಖ್ಯಮಂತ್ರಿಗಳು ಈ ಪ್ರಕರಣದಲ್ಲಿ ಎಳೆದು ತಂದು ಗೊಂದಲ ಸೃಷ್ಟಿ ಮಾಡಬಾರದು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.