ಶನಿವಾರ, ಸೆಪ್ಟೆಂಬರ್ 26, 2020
22 °C

‘ಮೋದಿ, ಶಾ ಎದುರು ಮಂಡಿಯೂರಿದ ಯಡಿಯೂರಪ್ಪ’: ಶಾಸಕ ನಾಗನಗೌಡ ಕಂದಕೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರ ಎದುರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಡಿಯೂರಿದ್ದಾರೆ. ಅಧಿಕಾರಕ್ಕಾಗಿ ಯಡಿಯೂರಪ್ಪ ಏನು ಬೇಕಾದರೂ ಮಾಡುತ್ತಾರೆ. ಆದರೆ, ಅಭಿವೃದ್ಧಿ ವಿಚಾರದಲ್ಲಿ ಸೇಡಿನ ರಾಜಕಾರಣ ಮಾಡುತ್ತ ಕಾಲಹರಣ ಮಾಡುತ್ತಾರೆ’ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಆರೋಪಿಸಿದರು.

‘75 ವರ್ಷ ತುಂಬಿರುವ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಕುರ್ಚಿಯಿಂದ ಯಾವಾಗ ಕೆಳಗಿಳಿಸುತ್ತಾರೆ ಎಂಬ ಭಯ ಶುರುವಾಗಿದೆ. ಅವರ ಅಂತ್ಯ ಕಾಲ ಸನ್ನಿಹಿತವಾಗಿದೆ’ ಎಂದು ಕುಟುಕಿದರು.

‘ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಗುರುಮಠಕಲ್‌ ಕ್ಷೇತ್ರಕ್ಕೆ

ನೀಡಲಾಗಿದ್ದ ₹ 4.5 ಕೋಟಿ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಪಟ್ಟಣದ ಖಾಸಾ ಮಠಕ್ಕೆ ನೀಡಿದ್ದ
₹ 50 ಲಕ್ಷ ಅನುದಾನ ಹಿಂಪಡೆದಿದ್ದಾರೆ’  ಎಂದು ಆರೋಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು