ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಗಳ ಭೇಟಿಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಜಿಲ್ಲೆಗೆ ನಾಳೆ ಬಿಎಸ್‌ವೈ ಭೇಟಿ
Last Updated 3 ಅಕ್ಟೋಬರ್ 2019, 15:37 IST
ಅಕ್ಷರ ಗಾತ್ರ

ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಕ್ಟೋಬರ್ 5ರಂದು ಮಧ್ಯಾಹ್ನ 2.30 ಗಂಟೆಗೆ ಯಾದಗಿರಿ ಜಿಲ್ಲೆಗೆ ಆಗಮಿಸಿ, ಪ್ರವಾಹದಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುವರು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3.30ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಸಂಜೆ 5 ಗಂಟೆಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದುಕೊರತೆ ಆಲಿಸುವರು. ರಾತ್ರಿ 7 ಗಂಟೆಗೆ ಯಾದಗಿರಿ ತಾಲ್ಲೂಕಿನ ಸುಕ್ಷೇತ್ರ ಅಬ್ಬೆತುಮಕೂರಿನ ಸದ್ಗುರು ವಿಶ್ವಾರಾಧ್ಯ ಸಿದ್ಧ ಸಂಸ್ಥಾನಕ್ಕೆ ಭೇಟಿ ನೀಡುವರು. ರಾತ್ರಿ 10.30 ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ, ಮುಖ್ಯಮಂತ್ರಿ ಪ್ರವಾಸ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 5 ಡಿಎಸ್‍ಪಿ, 14 ಸಿಪಿಐ, 38 ಪಿಎಸ್‍ಐ, 82 ಎಎಸ್‍ಐ, 665 ಹೆಡ್‍ಕಾನ್‍ಸ್ಟೆಬಲ್ ಮತ್ತು ಪೊಲೀಸ್ ಕಾನ್‍ಸ್ಟೆಬಲ್, 382 ಗೃಹರಕ್ಷಕ ದಳ ಸಿಬ್ಬಂದಿ ಹಾಗೂ ಡಿಎಆರ್ ಕೆಎಸ್‍ಆರ್‍ಪಿ ತುಕಡಿಗಳನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT