ಸೋಮವಾರ, ನವೆಂಬರ್ 23, 2020
22 °C

ಕ್ರಿಕೆಟ್ ಪಂದ್ಯಾವಳಿಗೆ ಬಸ್ಸುಗೌಡ ಬಿಳ್ಹಾರ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಹಾಲಗೇರಾ ಗ್ರಾಮದಲ್ಲಿ ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ  ಕಾಂಗ್ರೆಸ್ ಯುವ ಮುಖಂಡ ಬಸ್ಸುಗೌಡ ಬಿಳ್ಹಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಯುವಕರು ಕ್ರೀಡೆಯಲ್ಲಿ ತೊಡಗಿಸಿ ಕೊಳ್ಳುವುದರಿಂದ ದೈಹಿಕ, ಮಾನಸಿಕ ಸದೃಢರಾಗಬಹುದು. ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವುದರ ಮುಖಾಂತರ ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿ ಅಲ್ಲಿಂದ ರಾಜ್ಯ, ರಾಷ್ಟ್ರಮಟ್ಟದ ವರೆಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಶುಭ ಹಾರೈಸಿದರು.

ಎಲ್ಲಾ ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಬಿಜೆಪಿಯ ಹಿರಿಯ ಮುಖಂಡ ಸಿದ್ದಣ್ಣಗೌಡ ಕಾಡಂನೋರ್ಪಾ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.  ನಂತರ ಕ್ರೀಡಾಂಗಣದಲ್ಲಿ ಬಸ್ಸುಗೌಡ ಬಿಳ್ಹಾರ ಬ್ಯಾಟಿಂಗ್ ಹಿಡಿದು ಕೆಲ ಕಾಲ ಕ್ರೀಡಾಪಟುಗಳೊಂದಿಗೆ ಆಟವಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು