ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುರಪುರ: ಸಂಪುಟ ಸಭೆಯಲ್ಲಿ ಬೇಡಿಕೆ ಈಡೇರಿಸಲು ಒತ್ತಾಯ

Published : 13 ಸೆಪ್ಟೆಂಬರ್ 2024, 15:39 IST
Last Updated : 13 ಸೆಪ್ಟೆಂಬರ್ 2024, 15:39 IST
ಫಾಲೋ ಮಾಡಿ
Comments

ಸುರಪುರ: ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಶುಕ್ರವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶನಾಯಕ ಬೈರಿಮಡ್ಡಿ ಮಾತನಾಡಿ, ‘ಸೆ. 17 ರಂದು ಸರ್ಕಾರ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 (ಜೆ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. 371 (ಜೆ) ಅಡಿ ಬರುವ ಸಮಸ್ಯೆಗಳ ಪರಿಹರಿಸಲು ವಿಶೇಷ ನ್ಯಾಯಮಂಡಳಿ ಸ್ಥಾಪಿಸಬೇಕು. ಯಾದಗಿರಿಯಲ್ಲಿ ವಿಶ್ವವಿದ್ಯಾಲಯ ಆರಂಭಿಸಬೇಕು. ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಆರಂಭಿಸಬೇಕು. ಯಾದಗಿರಿ ಜಿಲ್ಲೆಯ ಸೈದಾಪುರ ಮತ್ತು ವಡಗೇರಾ ಪಟ್ಟಣ ಪಂಚಾಯತಿ ಎಂದು ಘೋಷಿಸಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮುನಾಯಕ ಮಲ್ಲಿಬಾವಿ, ಪದಾಧಿಕಾರಿಗಳಾದ ಶ್ರೀಶೈಲ ಕಾಚಾಪುರ, ಆನಂದ ಮಾಚಗುಂಡಾಳ, ಸೋಮು ಹಾಲಗೇರಿ, ಹಣಮಂತ ದೇವಿಕೇರಿ, ಹಣಮಂತ ಹಾಲಗೇರಿ, ಕೃಷ್ಣಾ ಮಂಗಿಹಾಳ, ಅಯ್ಯಪ್ಪ ವಗ್ಗಾಲಿ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT