ಯಾದಗಿರಿ: ‘ಗುರುಮಠಕಲ್ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಗಡಿ ಪ್ರದೇಶಗಳಲ್ಲಿ ಅಕ್ರಮ ಮದ್ಯ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಣಿಕೆಯ ಕುರಿತು ನಿಗಾವಹಿಸಿ ಮತ್ತು ನಿಯಂತ್ರಣಕ್ಕೆ ಅವಶ್ಯಕ ಮುನ್ನೆಚ್ಚರಿಕೆ ಹಾಗೂ ಕಠಿಣ ಕ್ರಮವಹಿಸಿ’ ಎಂದು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲದಾಪುರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ‘ಜನತೆಯ ಜೀವಕ್ಕೆ ಅಪಾಯಕರವಾದ ಪದಾರ್ಥಗಳ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಹಿ’ ಎಂದು ಸೂಚಿಸಿದರು.

‘ಮಾದಕ ವಸ್ತುಗಳು, ಕಳ್ಳಭಟ್ಟಿ ಸಾರಾಯಿ ಸೇರಿದಂತೆ ಅಮಲು ಪದಾರ್ಥಗಳ ನಿಯಂತ್ರಣಕ್ಕೆ ಅಬಕಾರಿ, ಪೋಲಿಸ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳೂ ಜನರಲ್ಲಿ ಜಾಗೃತಿ ಮೂಡಿಸಬೇಕು’
ಎಂದರು.

‘ಗ್ರಾಮ ಪಂಚಾಯಿತಿ, ನಗರ ಮತ್ತು ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅರಿವು ಮೂಡಿಸಿ. ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಕ ಜಾಗೃತಿ ಪೋಸ್ಟರ್ಗಳನ್ನು ಅಳವಡಿಸಿ. ಜತೆಗೆ ಆ ವ್ಯಾಪ್ತಿಯ ಪಾನ್ಶಾಪ್, ಗೂಡಂಗಡಿ, ಕಿರಾಣಾ, ವ್ಯಾನ್ ಮತ್ತು ಬೈಕ್ಗಳ ಮೂಲಕ ಅಕ್ರಮ ಮದ್ಯ ಮಾರುವ ಮತ್ತು ಸಾಗಿಸುವುದನ್ನು ಸಂಪೂರ್ಣ ಸ್ಥಗಿತಗೊಳಿಸಲು ಕಠಿಣ ಕ್ರಮಗಳು ಕೈಗೊಳ್ಳಿ’ ಎಂದರು.

‘ಅಬಕಾರಿ ತಿದ್ದುಪಡಿ ಕಾಯ್ದೆಯನ್ವಯ ನಿಷೇಧಿತ ಪ್ರದೇಶದಲ್ಲಿ ಅಕ್ರಮ ಮಾರಾಟದ ಕುರಿತು ನಿಗಾವಹಿಸಿ. ಸಂಶಯವಿದ್ದರೆ ಅನಿರೀಕ್ಷಿತ ದಾಳಿ ನಡೆಸಿ, ಪ್ರಕರಣ ದಾಖಲಿಸಿ.
ಅಬಕಾರಿ ಇಲಾಖೆ ಚುರುಕಾಗಿ ಕಾರ್ಯ ನಿರ್ವಹಿಸುವ ಜೊತೆಗೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ ಸೇರಿದಂತೆ ಅಬಕಾರಿ ಮತ್ತು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.