ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಯ ಹಸ್ತಾಂತರ: ‘ಸಿಬಿಐ ಸಾಕ್ಷ್ಯ ಒಪ್ಪಿಕೊಳ್ಳಲು ಅರ್ಹ’

Last Updated 27 ಏಪ್ರಿಲ್ 2018, 19:40 IST
ಅಕ್ಷರ ಗಾತ್ರ

ಲಂಡನ್: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ಭಾರತದ ಸಿಬಿಐ ಅಧಿಕಾರಿಗಳು ಸಲ್ಲಿಸಿರುವ ಸಾಕ್ಷ್ಯಗಳು ಒಪ್ಪಿಕೊಳ್ಳಲು ಅರ್ಹವಾಗಿವೆ ಎಂದು ಇಲ್ಲಿನ ವೆಸ್ಟ್‌ಮಿನಿಸ್ಟರ್‌ ಮ್ಯಾಜಿಸ್ಟ್ರೇಟ್ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಮಲ್ಯ ವಿರುದ್ಧದ ಸಾಕ್ಷ್ಯಗಳನ್ನು ಸ್ವೀಕರಿಸಿರುವ ನ್ಯಾಯಾಧೀಶರಾದ ಎಮ್ಮಾ ಅರ್ಬುತ್ನೋಟ್‌ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಲ್ಯ ಅವರನ್ನು ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ  ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ ನಲ್ಲಿ ನಡೆಯುತ್ತಿದೆ. ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗಿದ್ದ ಮಲ್ಯ, ವಿಚಾರಣೆ ಎದುರಿಸಿದರು. ಜುಲೈ 11ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ಜಾಮೀನು ನೀಡಲಾಗಿದೆ.

ಭಾರತಕ್ಕೆ ಬರಲಾರೆ: ‘ಕರ್ನಾಟಕ ಚುನಾವಣೆಯಲ್ಲಿಮತದಾನ ಮಾಡುವುದು ನನ್ನಪ್ರಜಾತಾಂತ್ರಿಕ ಹಕ್ಕು. ಆದರೂ ಭಾರತಕ್ಕೆ ಬರಲಾರೆ’ ಎಂದು ಮಲ್ಯ ಹೇಳಿದರು.

ನ್ಯಾಯಾಲಯದ ಹೊರಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿ ಯಿಸಿದ ಅವರು, ‘ಕರ್ನಾಟಕದ ರಾಜಕೀ ಯವನ್ನು ಹತ್ತಿರದಿಂದ ಗಮನಿಸುತ್ತಿಲ್ಲ. ಹೀಗಾಗಿ ಚುನಾವಣೆ ಕುರಿತು ನನ್ನ ಅಭಿಪ್ರಾಯ ಏನೂ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT