ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವೈಚಾರಿಕತೆ ಮೂಲಕ ಅರಿವಿನ ದಾರಿ ತೋರಿದ ಶರಣ

ದೇವರ ದಾಸಿಮಯ್ಯ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಅಭಿಮತ
Published 13 ಏಪ್ರಿಲ್ 2024, 15:44 IST
Last Updated 13 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ಯಾದಗಿರಿ: ‘ಸಮಾಜದಲ್ಲಿ ಮೌಢ್ಯ, ಕಂದಾಚಾರದ ವಿರುದ್ಧ ಕಾಂತ್ರಿಕಾರ ಹೆಜ್ಜೆಗಳನ್ನಿಟ್ಟ ಶರಣ ದೇವರ ದಾಸಿಮಯ್ಯನವರು ವೈಚಾರಿಕ ಚಿಂತನೆಗಳ ಮೂಲಕ ಜನರಿಗೆ ಅರಿವಿನ ದಾರಿ ತೋರಿದ್ದಾರೆ’ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಅಭಿಪ್ರಾಯಪಟ್ಟರು.

ಲೋಕಸಭಾ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸರಳ ಹಾಗೂ ಸಾಂಕೇತಿಕವಾಗಿ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಜಯಂತಿ ಆಚರಿಸಿ ಅವರು ಮಾತನಾಡಿದರು.

‘ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಡುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಮನುಷ್ಯ ತನ್ನಲ್ಲಿನ ಅಹಂಕಾರವನ್ನು ತೊರೆದು ಭಕ್ತಿ ಮಾರ್ಗದಲ್ಲಿ ನಡೆಯಬೇಕು ಎಂದು ಸಾರಿದ್ದಾರೆ‘ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಿ.ಎಸ್.ರಾಠೋಡ್, ಉ‍ಪವಿಭಾಗಾಧಿಕಾರಿ ಪ್ರಕಾಶ ಕುದರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಪಶುಪಾಲನ ಇಲಾಖೆ ಉಪನಿರ್ದೇಶಕ ಡಾ. ರಾಜುದೇಶಮುಖ, ಸಹಕಾರ ಸಂಘಗಳ ಉಪನಿರ್ದೇಶಕ ಪವನಕುಮಾರ, ತಹಶೀಲ್ದಾರರಾದ ನಾಗಮ್ಮ ಕಟ್ಟಿಮನಿ, ಯಲ್ಲಪ್ಪ, ಸಮಾಜದ ಮುಖಂಡರಾದ ಬಸವರಾಜ ಹುನಗುಂದ, ವಿಜಯ ಮಾರ್ಪಲ್ಲಿ, ಸಹಾಯಕ ಸಾಂಖಿಕ ಇಲಾಖೆ ಅಧಿಕಾರಿ ನಾಗರಾಜ ನಾಗೂರ, ಲೆಕ್ಕ ಪರಿಶೋಧನಾಧಿಕಾರಿ ಸುರೇಶ ಪಾಣಿಬಾತೆ ಸೇರಿದಂತೆ ವಿವಿಧ ಇಲಾಖೆಯ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT