ಬುಧವಾರ, ಸೆಪ್ಟೆಂಬರ್ 18, 2019
28 °C

ಅವತಾರ ಪುರುಷ ಶ್ರೀಕೃಷ್ಣ ಜಯಂತಿ ಆಚರಣೆ

Published:
Updated:
Prajavani

ಯಾದಗಿರಿ: ಅವತಾರ ಪುರುಷ ಹಾಗೂ ಗೀತ ಬೋಧಕನಾದ ಶ್ರೀಕೃಷ್ಣ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶ್ರೀಕೃಷ್ಣ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, 'ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲ ಪ್ರವಾಹದಿಂದಾಗಿ ಜನರು ಸಂಕಷ್ಟದಿಂದ ಬಳಲುತ್ತಿರುವ ಕಾರಣ ಶ್ರೀಕೃಷ್ಣ ಜಯಂತಿಯನ್ನು ಆಚರಿಸುವುದು ಸೂಕ್ತವಲ್ಲವೆಂದು ಹಾಗೂ ಜಯಂತಿ ಆಚರಣೆಗೆ ನಿಗದಿಪಡಿಸಿರುವ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬೇಕೆಂದು ರಾಜ್ಯಮಟ್ಟದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಯಾದವ ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ಜಿಲ್ಲಾಡಳಿತ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ' ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಹಾಯಕ ಅಧಿಕಾರಿ ಅರುಣಕುಮಾರ ಕುಲಕರ್ಣಿ, ಯಾದವ ಸಮಾಜದ ಜಿಲ್ಲಾ ಅಧ್ಯಕ್ಷ ವೆಂಕಟೇಶ ಮಂಟೋಳಿ ಗೋಗಿ, ಚಂದ್ರಶೇಖರ ಚೂರಿ, ಹಣಮಂತ್ರಾಯ ಹಿರಿಬಗೇರಿ, ವೆಂಕಟೇಶ ಹೊನಗೇರಾ, ಅಮರೇಶ ಯಾದವ, ಶರಣಬಸವ ಯಾದವ, ರಮೇಶ ಯಾದವ, ದೇವಿಂದ್ರಪ್ಪ ಬೆಳಗೇರಾ, ಸಂತೋಷ ಯಾದವ, ವೆಂಕಟೇಶ ಶೆಟ್ಟಿ ಬಾಬು, ಭೀಮಣ್ಣ ವಾಡೇದ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

Post Comments (+)