ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಚರಂಡಿ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸುತ್ತಾರೆಯೇ ರಾಜೂಗೌಡ?

ಶಾಸಕ ರಾಜೂಗೌಡರ ಆಪ್ತ ಮೂಲಗಳ ಮಾಹಿತಿ
Last Updated 27 ಜುಲೈ 2020, 16:36 IST
ಅಕ್ಷರ ಗಾತ್ರ

ಯಾದಗಿರಿ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸುರಪುರ ಶಾಸಕ ರಾಜೂಗೌಡ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಸ್ಥಾನ ತಿರಸ್ಕರಿಸುವ ಸಾಧ್ಯತೆ ಇದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಸದ್ಯ ಹೋಂ ಕ್ವಾರಂಟೈನ್‌ನಲ್ಲಿರುವ ಶಾಸಕರು, ‘ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವುದು ನನಗೆ ತಿಳಿದಿರಲಿಲ್ಲ. ನನ್ನ ಬದಲಿಗೆ ಕ್ಷೇತ್ರದ ಮುಖಂಡರಿಗೆ ಅಧ್ಯಕ್ಷ ಸ್ಥಾನ ಕೊಡಬೇಕಾಗಿತ್ತು. ‌ಸದ್ಯ ಈ ಬಗ್ಗೆ ಮಾತನಾಡಲ್ಲ. ಕ್ವಾರಂಟೈನ್‌ ಅವಧಿ ಮುಗಿದ ನಂತರಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ' ಎಂದು ಹೇಳಿಕೆ ನೀಡಿದ್ದಾರೆ.

ಸಿಎಂ ನಿರ್ಧಾರಕ್ಕೆ ಬದ್ಧ: ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಾರುವುದು ನಿಜ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಕ ಮಾಡಿದ್ದಾರೆ. ಅವರ ನಿರ್ದಾರಕ್ಕೆ ಬದ್ಧ. ಆರೂ ಜಿಲ್ಲೆಗಳ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ’ ಎಂದು ಕಲಬುರ್ಗಿ ಶಾಸಕದತ್ತಾತ್ರೇಯ ಪಾಟೀಲ ರೇವೂರ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT