ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಾಸ್ಟೆಲ್ ಆಹಾರ ಗುಣಮಟ್ಟ ಪರಿಶೀಲಿಸಿ’

ಲೋಕಾಯುಕ್ತ ಪೊಲೀಸರಿಂದ ಅಧಿಕಾರಿಗಳ ಸಭೆ: ಡಿವೈಎಸ್ಪಿ ಸೂಚನೆ
Last Updated 25 ಅಕ್ಟೋಬರ್ 2019, 11:16 IST
ಅಕ್ಷರ ಗಾತ್ರ

ಯಾದಗಿರಿ: ‘ಜಿಲ್ಲೆಯಲ್ಲಿನ ಎಲ್ಲ ವಸತಿ ನಿಲಯಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿ ವಿದ್ಯಾರ್ಥಿಗಳ ಆಹಾರದ ಗುಣಮಟ್ಟವನ್ನು ವಾರಕೊಮ್ಮೆ ಪರಿಶೀಲಿಸಬೇಕು’ ಎಂದು ಲೋಕಾಯುಕ್ತ ಡಿವೈಎಸ್ಪಿ ಉಮೇಶ ಬಿ.ಚಿಕ್ಕಮಠ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸಾರ್ವಜನಿಕರಿಂದ ಕುಂದು ಕೊರತೆಗಳ ಸ್ವೀಕಾರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿನ ಅಂಗನವಾಡಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲಎಂಬ ದೂರುಗಳು ಕೇಳಿ ಬರುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ವಾರಕ್ಕೊಮ್ಮೆ ಅಂಗನವಾಡಿಗಳಿಗೆ ಭೇಟಿ ನೀಡಬೇಕು. ಅಲ್ಲದೆ ಮಕ್ಕಳ ಯೋಗ ಕ್ಷೇಮ ವಿಚಾರಿಸಬೇಕು’ ಎಂದರು.

‘ಸರ್ಕಾರ ಜನರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಫಲಾನುಭವಿಗಳಿಗೆ ಸರಿಯಾದ ರೀತಿ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು. ಆ ಮೂಲಕ ಜನರಿಗೆ ಹತ್ತಿರವಾಗಿ ಕಾರ್ಯನಿರ್ವಹಿಸಬೇಕು. ಪ್ರತಿ ತಿಂಗಳು ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

‘ಅರಣ್ಯ ಇಲಾಖೆಯಲ್ಲಿ ಒತ್ತುವರಿಯಾದ ಭೂಮಿಯನ್ನು ಸರ್ವೆ ನಡೆಸಿ ವರದಿ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಸಾರ್ವಜನಿಕರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ಅನುಕೂಲ ಮಾಡಿಕೊಡಬೇಕು’ ಎಂದು ಸೂಚಿಸಿದರು.

ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ:ಅಬಕಾರಿ ಪೊಲೀಸರು ಕನಿಷ್ಠವಾರಕ್ಕೊಮ್ಮೆಯಾದರೂ ಚೆಕ್‌ಪೊಸ್ಟ್‌ಗಳಿಗೆ ಭೇಟಿ ನೀಡಿ, ಅಕ್ರಮ ಮದ್ಯ ಸಾಗಣೆ ಮೇಲೆ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಪರಿಶೀಲಿಸಬೇಕು’ ಎಂದು ಸೂಚಿಸಿದರು.ಲೋಕಾಯುಕ್ತ ಸಿಪಿಐ ಗುರುರಾಜ ಕಟ್ಟಿಮನಿ, ಇಒ ಬಸವರಾಜ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT