ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪೌರ ಸನ್ಮಾನ ನಾಳೆ

ಜಿಲ್ಲೆ ಘೋಷಣೆ ಮಾಡಿದ ಸಿಎಂಗೆ ಅಭಿನಂದನೆ: ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ
Last Updated 5 ಜನವರಿ 2021, 5:43 IST
ಅಕ್ಷರ ಗಾತ್ರ

ಯಾದಗಿರಿ: ₹ 536.91 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡುವ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಗರಸಭೆ ವತಿಯಿಂದ ಬುಧವಾರ (ಜ.6) ಪೌರ ಸನ್ಮಾನ ಮಾಡಲಾಗುವುದು ಎಂದು ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ ತಿಳಿಸಿದರು.

2009 ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರುಯಾದಗಿರಿ ಜಿಲ್ಲೆ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಂಗವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರಸಭೆ ಕಟ್ಟಡ ಹಳೆಯದಾಗಿದ್ದು, ಸುಸಜ್ಜಿತ ನಗರಸಭೆ ಕಟ್ಟಡಕ್ಕೆ ಇದೇ ವೇಳೆ ಸಿಎಂಗೆ ಮನವಿ ಸಲ್ಲಿಸಲಾಗುವುದು. ನಗರದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನಕ್ಕಾಗಿ ಮನವಿ ಮಾಡುವುದಾಗಿ ತಿಳಿಸಿದರು.

ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಸರ್ಕಾರದಿಂಸ ಹೆಚ್ಚಿನ ಅನುದಾನ ಕೊಡಿಸುವ ಭರವಸೆ ನೀಡಿದ್ದಾರೆ. ಅವರ ಜೊತೆಗೆ ಬೆಂಗಳೂರಿಗೆ ನಿಯೋಗ ತೆರಳಿ ಅಲ್ಲಿಯೂ ಮನವಿ ಮಾಡಲಾಗುವುದು. ಹೊಸ ಕಟ್ಟಡಕ್ಕೆ ಒತ್ತಾಯ ಪೂರ್ವಕವಾಗಿ ಆಗ್ರಹಿಸುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT