ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ | ಹೆರಿಗೆ ವೇಳೆ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Published 4 ಫೆಬ್ರುವರಿ 2024, 15:57 IST
Last Updated 4 ಫೆಬ್ರುವರಿ 2024, 15:57 IST
ಅಕ್ಷರ ಗಾತ್ರ

ಯಾದಗಿರಿ: ತಾಲ್ಲೂಕಿನ ಹೊನಗೇರಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಸ್ಥರು ಆರೋಪಿಸಿದ್ದಾರೆ.

ತೀವ್ರ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಹನುಮಂತಿಗೆ ಚಿಕಿತ್ಸೆ ನೀಡಲು ವೈದ್ಯರೇ ಆಸ್ಪತ್ರೆಯಲ್ಲಿ ಇರಲಿಲ್ಲ. ಹೀಗಾಗಿ ಸ್ಟಾಫ್‌ ನರ್ಸ್‌, ಡಿ‌ ಗ್ರೂಪ್ ಸಿಬ್ಬಂದಿ ಗರ್ಭಿಣಿ ಹೆರಿಗೆ ಮಾಡಿಸಲು ಮುಂದಾಗಿದ್ದರು. ತಾಯಿ ಗರ್ಭದಿಂದ ಮಗುವಿನ ಕಾಲು ಹೊರಗೆ ಬಂದು ಅರ್ಧಗಂಟೆ ಬಳಿಕ ಹೆರಿಗೆಯಾಗಿದೆ. ಹೆರಿಗೆಯಾದ ಬಳಿಕ ನರಳಾಡಿ ಹಸುಗೂಸು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ಯಾವುದೇ ದುರ್ಘಟನೆ ಆಗುತ್ತಿರಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಯಾದಗಿರಿ ತಾಲ್ಲೂಕಿನ ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ‘ಡಾ.ಖಾಜಾ ಬೇಗಂ ತರಬೇತಿಗಾಗಿ ಯಾದಗಿರಿಗೆ ಬಂದಿದ್ದರು. ವರದಿಗಳು ನಾರ್ಮಲ್‌ ಇದ್ದ ಕಾರಣ ಹೀಗಾಗಿ ಸ್ಟಾಫ್‌ ನರ್ಸ್‌ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಆದರೆ, ಮೊದಲು ಶಿಶು ಕಾಲು ಹೊರಗೆ ಬಂದಿದೆ. ನಂತರ ಉಸಿರಾಟದ ತೊಂದರೆಯಿಂದ ಶಿಶು ಮೃತಪಟ್ಟಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT