ಯಾದಗಿರಿ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.

ಹುಣಸಗಿ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಶ್ರೀಶೈಲ್ ಸಂಗಣ್ಣ ಶಿಕ್ಷೆಗೆ ಒಳಗಾದ ಅಪರಾಧಿ. ಕೆಲಸಕ್ಕೆ ಹೊಲಕ್ಕೆ ಹೋಗಿದ್ದ ಬಾಲಕಿಯನ್ನು ಮದುವೆ ಆಗುವುದಾಗಿ ಶ್ರೀಶೈಲ್ ನಂಬಿಸಿದ್ದ. ಬಾಲಕಿಯನ್ನು ಕರೆದೊಯ್ದು, ಅತ್ಯಾಚರ ಎಸಗಿದ್ದನ್ನು. ಯಾರಿಗೂ ಹೇಳದಂತೆಯೂ ಜೀವ ಬೆದರಿಕೆ ಹಾಕಿದ್ದನ್ನು.

ಬಾಲಕಿ ಗರ್ಭಿಣಿಯಾದರೂ ಆಕೆಯನ್ನು ಮದುವೆ ಆಗಲಿಲ್ಲ. ಬೇರೊಂದು ಹುಡುಗಿ ಜತೆಗೆ ಮದುವೆ ಆಗುವುದಾಗಿ ಹೇಳಿದ್ದ. ಬಳಿಕ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಶ್ರೀಶೈಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಹುಣಸಗಿ ವೃತ್ತ ಆರಕ್ಷಕ ನಿರೀಕ್ಷ ದೌಲತ್ ಎನ್.ಕೆ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಾದ–ಪ್ರತಿವಾದ ಆಲಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್.ಜೆ. ಅವರು, ಶ್ರೀಶೈಲ್ಗೆ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಹೆಚ್ಚಿನ ಪರಿಹಾರವಾಗಿ ಪಡೆಯುವಂತೆಯೂ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ವಿಶ್ವನಾಥ ಉಭಾಳೆ ಮತ್ತು ಗುರುಲಿಂಗಪ್ಪ ಶ್ರೀಮಂತ ತೇಲಿ ಅವರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.