ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಸಜೆ

7

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಸಜೆ

Published:
Updated:

ಯಾದಗಿರಿ: ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 10 ವರ್ಷ ಸಜೆ, ₹1ಲಕ್ಷ ದಂಡ ಮತ್ತು ಸಂತ್ರಸ್ತ ಬಾಲಕಿಗೆ ₹1ಲಕ್ಷ ಪರಿಹಾರ ನೀಡುವಂತೆ ಅಂತಿಮ ತೀರ್ಪು ನೀಡಿದೆ.

ಸುರಪುರ ತಾಲ್ಲೂಕಿನ ರಂಗಪೇಟೆ ನಿವಾಸಿ ದೇವರಾಜ ಈಚೆಗೆ ಬೀಚ್ ಮೊಹಲ್ಲಾದಲ್ಲಿ ಸ್ನಾನ ಮಾಡುತ್ತಿದ್ದ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಸುರಪುರ ಠಾಣೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅಪರಾಧಿ ವಿರುದ್ಧ ಸಾಕ್ಷ್ಯಾಧಾರಗಳು ಸಾಬೀತಾದ್ದರಿಂದ ನ್ಯಾಯಾಧೀಶ ಸದಾನಂದ ಎನ್‌. ನಾಯಕ್‌ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ದಂಡ ಹಾಗೂ ಪರಿಹಾರ ಸೇರಿ ₹2 ಲಕ್ಷ ಹಣವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ತೀರ್ಪಿನಲ್ಲಿ ಆದೇಶಿಸಿದ್ದಾರೆ.

ಸಂತ್ರಸ್ತ ಬಾಲಕಿ ಪರವಾಗಿ ಸರ್ಕಾರಿ ವಕೀಲರಾದ ಎಸ್.ಅನಂತರೆಡ್ಡಿ ವಾದ ಮಂಡಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !