ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ಮಕ್ಕಳ ಸಾವು

ಮಕ್ಕಳು ವಿಷ ಸೇವಿಸಿದ್ದಕ್ಕೆ ಆಘಾತಗೊಂಡು ತಾಯಿ ಆತ್ಮಹತ್ಯೆಗೆ ಯತ್ನ
Last Updated 26 ಫೆಬ್ರುವರಿ 2020, 5:15 IST
ಅಕ್ಷರ ಗಾತ್ರ

ಯಾದಗಿರಿ: ಮನೆಯಲ್ಲಿಟ್ಟಿದ್ದ ಕ್ರಿಮಿನಾಶಕವನ್ನು ಜ್ಯೂಸ್ ಎಂದು ತಿಳಿದು ಸೇವಿಸಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವಡಗೇರಾ ತಾಲ್ಲೂಕಿನ ಕೊಡಾಲ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಎರಡು ವರ್ಷದ ಖೈರುನ್, 4 ತಿಂಗಳ ಅಪ್ಸಾನಾ ಸಾವನ್ನಪ್ಪಿರುವ ಪುಟಾಣಿ ಮಕ್ಕಳು.

ಘಟನೆ ವಿವರ:ತಾಯಿ ಶಹೇನಾಜ್ ಅಡುಗೆ ಮಾಡುತ್ತಿದ್ದರು. ಮಕ್ಕಳು ಆಟವಾಡುತ್ತಾ ಮನೆಯಲ್ಲಿದ್ದ ಕ್ರಿಮಿನಾಶಕ ಬಾಟಲಿಯಲ್ಲಿದ್ದ ವಿಷ ಸೇವಿಸಿದ್ದಾರೆ. ಇದರಿಂದ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಮಕ್ಕಳ ಸ್ಥಿತಿ ಕಂಡ ತಾಯಿ ಶಹೇನಾಜ್, ಪತಿ ಹೊಡೆಯಬಹುದು ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅಸ್ವಸ್ಥ ತಾಯಿ ಶಹೇನಾಜ್ ಯಾದಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT