ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೋರನಹಳ್ಳಿ 6 ಮಂದಿ ಆತ್ಮಹತ್ಯೆ ಘಟನೆ: ಸಿಐಡಿ ತನಿಖೆಗೆ ಆಗ್ರಹ

Last Updated 9 ಜುಲೈ 2021, 4:14 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಾಲ್ಕು ಮಕ್ಕಳ ಸಮೇತ ಕೃಷಿ ಹೊಂಡಕ್ಕೆ ಹಾರಿದ ಭೀಮರಾಯ ದಂಪತಿ ಸಾವು ಅನುಮಾನಾಸ್ಪದ ರೀತಿಯಲ್ಲಿ ಇದೆ. ಇಡೀ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಗುರುವಾರ ಸಂಯುಕ್ತ ಕರ್ನಾಟಕ ಹೋರಾಟ ಸಮಿತಿ ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ‌್ ಜಗನಾಥರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನ ಇಬ್ರಾಹಿಂಪೂರ ಮತ್ತು ಮಹಲ್ರೋಜಾ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು. ಕಳಪೆ ರಸಗೊಬ್ಬರ ಹಾಗೂ ಕ್ರಿಮಿನಾಶಕ ಔಷಧಿ ಮಾರಾಟ ಮಾಡಿ ರೈತರನ್ನು ವಂಚಿಸಿದ ರಸಗೊಬ್ಬರ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರ ಜತೆಗೆ ಪರವಾನಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ತೈಲ ಬೆಲೆ ಹೆಚ್ಚಳಕ್ಕೆ ಕಡಿವಾಣ ಹಾಕಬೇಕು. ರೈತರು, ಕೃಷಿ ಕೂಲಿಕಾರರು, ಕಾರ್ಮಿಕರು ವರ್ಷದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬೆಳೆದ ಬೆಳೆಗೆ ಬೆಂಬಲವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ರೈತ ಮುಖಂಡರಾದ ಚೆನ್ನಪ್ಪ ಆನೇಗುಂದಿ, ನಾಗರತ್ನ ಪಾಟೀಲ್ ಹೇಳಿದರು.

ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ಎಂ.ಸಾಗರ, ಸಿ.ಐ.ಟಿ.ಯು ಜಿಲ್ಲಾ ಸಂಚಾಲಕ ಮುಖಂಡ ಜೈಲಾಲ ತೋಟದಮನಿ, ಮಲ್ಲಯ್ಯ ಪೋಲಂಪಲ್ಲಿ,ಶರಣು ಮಂದರವಾಡ, ಮಲ್ಲಣ್ಣ ಚಿಂತಿ, ಗಣೇಶ ಅನವಾರ, ಅಮರಪ್ಪ ಸಗರ, ಮಲ್ಲಣ್ಣ ಕಕ್ಕಸಗೇರಾ, ರಂಗಮ್ಮ ಕಟ್ಟಿಮನಿ, ಯಮನಮ್ಮ ದೋರನಹಳ್ಳಿ, ಶಾಮಲಾ ಮಕಾಶಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT