ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನ ನಾಳೆ

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಚಿವರು, ಸಂಸದರು, ಶಾಸಕರು ಭಾಗಿ: ಮಾಗನೂರ
Last Updated 9 ಜನವರಿ 2020, 15:53 IST
ಅಕ್ಷರ ಗಾತ್ರ

ಯಾದಗಿರಿ: ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಅಭಿಯಾನ ಜನವರಿ 11ರಂದು ಸಂಜೆ 5 ಗಂಟೆಗೆ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಜನರಿಗೆ ಸಂಬಂಧಿಸಿದ ಕಾಯ್ದೆಯಾಗಿದೆ. ಕಾಂಗ್ರೆಸ್‌ ಹಾಗೂ ಇತರ ರಾಜಕೀಯ ಪಕ್ಷಗಳು ಕಾಯ್ದೆ ಬಗ್ಗೆ ಗೊಂದಲ ಮೂಡಿಸುತ್ತಿವೆ. ಇದನ್ನು ನಿವಾರಿಸಲು ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದೇಶದ ಸುರಕ್ಷತೆ ಕಾಪಾಡುವವರಾಗಿದ್ದಾರೆ. ನುಸುಳಕೋರರಿಗೆ ದೇಶದಲ್ಲಿ ಜಾಗವಿಲ್ಲ. ‌ಈ ಕಾಯ್ದೆಯಿಂದ ದೇಶದ ಅಲ್ಪ ಸಂಖ್ಯಾತರಿಗೆ ಯಾವುದೇ ತೊಂದರೆ ಇಲ್ಲ. ಆದರೂ ಕೆಲವರು ಅವರಲ್ಲಿ ಭಯಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಚಿವ ಪ್ರಭು ಚವಾಣ್‌, ಸಂಸದರಾದ ಉಮೇಶ ಜಾಧವ, ರಾಜಾ ಅಮರೇಶ ನಾಯಕ, ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬರಾವ್‌ ಚಿಂಚನಸೂರ, ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ರಾಜೂಗೌಡ, ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ವೀರಬಸಂತರೆಡ್ಡಿ ಮುದ್ನಾಳ, ಡಾ.ಎ.ಬಿ.ಮಾಲಕರೆಡ್ಡಿ, ಗುರುಪಾಟೀಲ ಶಿರವಾಳ ಹಾಗೂ ಬೂತ್‌ಮಟ್ಟದಿಂದ ಸುಮಾರು15ರಿಂದ 20 ಸಾವಿರ ಜನ ಬರುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಮಾಜಿ ಶಾಸಕ ವೀರಬಸಂತರೆಡ್ಡಿ ಮುದ್ನಾಳ, ಅಭಿಯಾನದ ಸಂಚಾಲಕ ಶರಣಭೂಪಾಲರೆಡ್ಡಿ ನಾಯ್ಕಲ್‌, ನಗರಸಭೆ ಸದಸ್ಯೆ ಲಲಿತಾ ಅನಪುರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೇವರಾಜ ನಾಯಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT