ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳೊಂದಿಗೆ ಸಿಎಂ ವಿಡಿಯೊ ಸಂವಾದ: ಪ್ರವಾಹ ಎದುರಿಸಲು ಸನ್ನದ್ಧ

Last Updated 20 ಜೂನ್ 2021, 1:13 IST
ಅಕ್ಷರ ಗಾತ್ರ

ಯಾದಗಿರಿ: 2021ನೇ ಸಾಲಿನ ಮುಂಗಾರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಡಿಯೊ ಸಂವಾದ ನಡೆಸಿ‌ದರು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾತನಾಡಿ, ಭೀಮಾನದಿ ಮತ್ತು ಕೃಷ್ಣಾನದಿ ತೀರದಲ್ಲಿ ಪ್ರವಾಹಕ್ಕೆ ಒಳಗಾಗುವ ಗ್ರಾಮಗಳಲ್ಲಿನ ಜನರ ರಕ್ಷಣೆ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ಸಲಹೆ ನೀಡಿದ್ದೇವೆ ಎಂದು ತಿಳಿಸಿದರು.

ಸಾರ್ವಜನಿಕರಿಗೆ ಪ್ರವಾಹ ಮುನ್ನೆಚ್ಚರಿಕೆ ನೀಡಲು ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರ ಸ್ಥಾಪಿಸಿದ್ದೇವೆ. ಜಿಲ್ಲೆಯಾದ್ಯಂತ 36 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಿದ್ಧತೆಯಲ್ಲಿ ಇಟ್ಟುಕೊಳ್ಳಲಾಗಿದೆ. ಆಹಾರ ಪದಾರ್ಥ, ಔಷಧಿ, ರಕ್ಷಣಾ ಸಾಮಗ್ರಿಗಳ ಸಂಗ್ರಹಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಶೇ 37 ರಷ್ಟು ಹೆಚ್ಚು ಮಳೆ ಬಂದಿದೆ. ರೈತರಿಗೆ ಬೀಜದ ಕೊರತೆ ಇಲ್ಲ. ವಿಪತ್ತು ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಪಿ.ಡಿ ಖಾತೆಯಲ್ಲಿ ₹35 ಕೋಟಿ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾಶರ್ಮಾ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT